Monday, July 28, 2025

ಸತ್ಯ | ನ್ಯಾಯ |ಧರ್ಮ

ಮಾವೋವಾದಿಗಳ ಸಂಪರ್ಕದ ಪ್ರಕರಣದಿಂದ ಪ್ರೊ.ಸಾಯಿಬಾಬಾ ಖುಲಾಸೆ

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಅಡಿಯಲ್ಲಿ JNU ಮಾಜಿ ಪ್ರೊಫೆಸರ್ ಜಿ.ಎನ್.ಸಾಯಿಬಾಬಾ ಅವರನ್ನು 2014 ರಲ್ಲಿ ಬಂಧಿಸಿ ಜೈಲಿಗೆ ಕಳಿಸಲಾಗಿತ್ತು. ಬಾಂಬೆ ಹೈಕೋರ್ಟ್ ನಾಗ್ಪುರ ಪೀಠದಲ್ಲಿ ಈ ಬಗ್ಗೆ ವಿಚಾರಣೆ ಕೂಡಾ ನಡೆಸಿತ್ತು. ಸಧ್ಯ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಜಿ ಎನ್ ಸಾಯಿಬಾಬಾ ಅವರನ್ನು ಮಾವೋವಾದಿ ಸಂಪರ್ಕ ಪ್ರಕರಣದಿಂದ ಖುಲಾಸೆಗೊಳಿಸಿದೆ ಮತ್ತು ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ನ್ಯಾಯಮೂರ್ತಿ ರೋಹಿತ್ ದೇವ್ ಮತ್ತು ಅನಿಲ್ ಪನ್ಸಾರೆ ಅವರಿದ್ದ ವಿಭಾಗೀಯ ಪೀಠವು ಸಾಯಿಬಾಬಾ ಅವರು 2017 ರ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯನ್ನು ಅಂಗೀಕರಿಸಿತು ಮತ್ತು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ದೈಹಿಕವಾಗಿ ತೀರಾ ಬಳಲುತ್ತಿದ್ದ, ಅಸಾಮರ್ಥ್ಯದಿಂದ ಗಾಲಿಕುರ್ಚಿಯ ಮೇಲೆ ಕುಳಿತಿರುವ ಪ್ರೊ.ಸಾಯಿಬಾಬಾ ಪ್ರಸ್ತುತ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಪ್ರಕರಣದ ಇತರ ಐವರು ಅಪರಾಧಿಗಳ ಮೇಲ್ಮನವಿಯನ್ನು ಪೀಠವು ಅಂಗೀಕರಿಸಿ, ಅವರನ್ನೂ ಖುಲಾಸೆಗೊಳಿಸಿದೆ. ಐವರಲ್ಲಿ ಒಬ್ಬರ ಮೇಲ್ಮನವಿಯ ವಿಚಾರಣೆ ಬಾಕಿ ಉಳಿದಿದ್ದಾರೆ.

ಅಪರಾಧಿಗಳು ಈ ಪ್ರಕರಣ ಅಲ್ಲದೇ ಬೇರೆ ಯಾವುದೇ ಪ್ರಕರಣದಲ್ಲಿ ಭಾಗಿ ಆಗಿಲ್ಲದೇ ಇದ್ದರೆ, ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನಾಗ್ಪುರ ಪೀಠವು ಸೂಚಿಸಿದೆ.

ಮಾರ್ಚ್ 2017 ರಲ್ಲಿ, ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಪ್ರೊ.ಸಾಯಿಬಾಬಾ ಮತ್ತು ಒಬ್ಬ ಪತ್ರಕರ್ತ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (JNU) ವಿದ್ಯಾರ್ಥಿ ಸೇರಿದಂತೆ ಇತರರನ್ನು ಮಾವೋವಾದಿ ಸಂಪರ್ಕ ಮತ್ತು ದೇಶದ ವಿರುದ್ಧ ಯುದ್ಧ ಮಾಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಅಡಿಯಲ್ಲಿ ಶಿಕ್ಷೆ ವಿಧಿಸಿತ್ತು.

ಕಟ್ಟುನಿಟ್ಟಾದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಮತ್ತು ಭಾರತೀಯ ದಂಡ ಸಂಹಿತೆ (IPC) ಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಸಾಯಿಬಾಬಾ ಮತ್ತು ಇತರರನ್ನು ನ್ಯಾಯಾಲಯವು ತಪ್ಪಿತಸ್ಥರೆಂದು ಪರಿಗಣಿಸಿತ್ತು. ಈ ಪ್ರಕರಣದ ಅಡಿಯಲ್ಲಿ ಅವರಿಗೆ ಜೀವಾವಧಿ ಶಿಕ್ಷೆಗೂ ಸಹ ಆದೇಶಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page