ಹಾಸನ : 2026ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಫೆ.28 ರಿಂದ ಮಾ.17 ರವರೆಗೆ ಹಾಸನ ವ್ಯಾಪ್ತಿಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್/ಸೈಬರ್/ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವನ್ನು ನಿರ್ಬಂಧಿಸಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 163 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ನಿಷೇದಾಜ್ಷೆ ಜಾರಿಗೊಳಿಸಿ ಆದೇಶಿಸಿದ್ದಾರೆ.
