SSLC-PUC ಪರೀಕ್ಷಾ ಕೇಂದ್ರದ ಸುತ್ತ ನಿಷೇದಾಜ್ಞೆ – ಡಿ.ಸಿ ಕೆ.ಎಸ್ ಲತಾಕುಮಾರಿ 

ಹಾಸನ : 2026ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳು ಫೆ.28 ರಿಂದ ಮಾ.17 ರವರೆಗೆ ಹಾಸನ ವ್ಯಾಪ್ತಿಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್/ಸೈಬರ್/ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವನ್ನು ನಿರ್ಬಂಧಿಸಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 163 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ನಿಷೇದಾಜ್ಷೆ ಜಾರಿಗೊಳಿಸಿ ಆದೇಶಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು