ಕಲಬುರಗಿ : ಹೈಕೋರ್ಟ್ (High Court) ಮುಂಭಾಗದಲ್ಲೇ ಪಬ್ಲಿಕ್ ಪ್ರಾಸಿಕ್ಯೂಟರ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಪೀಠದ ಸರ್ಕಾರಿ ಅಭಿಯೋಜಕ ರಾಜಮಹೇಂದ್ರ ಎನ್ನುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಜಮಹೇಂದ್ರ ಜಾತಿ ನಿಂದನೆ ಕೇಸ್‌ನಲ್ಲಿ 50 ಸಾವಿರ ಬೇಡಿಕೆಯಿಟ್ಟಿದ್ದರು. ನವೀನ್ ಎಂಬುವರ ಬಳಿ 50 ಸಾವಿರಕ್ಕೆ ಬೇಡಿಕೆ ಇಟ್ಟು ಮುಂಗಡವಾಗಿ 25 ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿಗೆ ಒಳಗಾಗಿದ್ದಾರೆ. ಜಾತಿ ನಿಂದನೆ ಕೇಸ್‌ನಲ್ಲಿ ಎದುರಾಳಿಗೆ ಸಹಕಾರ ನೀಡಲು ರಾಜಮಹೇಂದ್ರ ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ರಾಜಮಹೇಂದ್ರನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು, ಡಿವೈಎಸ್ಪಿ ಶೀಲವಂತ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
