Home ಬ್ರೇಕಿಂಗ್ ಸುದ್ದಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ; ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ; ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

0

ಹೇಮಾವತಿ ಲಿಂಕ್ ಕೆನಾಲ್ ಆರಂಭಕ್ಕೆ ವಿರೋಧಿಸಿರುವ ತುಮಕೂರು ಭಾಗದ ರೈತರ ಹೋರಾಟ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಗೆ ಪೊಲೀಸರು ಮಾರ್ಗ ಮಧ್ಯೆ ತಡೆದು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ತುಮಕೂರಿನ ಗುಬ್ಬಿಯಲ್ಲಿ ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ.

ಗುಬ್ಬಿ ತಾಲ್ಲೂಕು ಸಂಕಾಪುರ ಗ್ರಾಮ ಹಾಗೂ ಡಿ.ರಾಂಪುರ ಗ್ರಾಮದಲ್ಲಿ ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳದ 10 ಕಿ.ಮೀ. ಸುತ್ತಳತೆಯ ಪ್ರದೇಶಕ್ಕೆ ಅನ್ವಯವಾಗುವಂತೆ ಶುಕ್ರವಾರದಿಂದ ನಾಳೆ ಮುಂಜಾನೆಯಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದೆ.

ಹೇಮಾವತಿ ಎಕ್ಸ್ಪ್ರೆಸ್ ಪೈಪ್‌ಲೈನ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯವರು ಇಂದು ಬೃಹತ್ ಪ್ರತಿಭಟನೆ ಚಳುವಳಿಯನ್ನು ಹಮ್ಮಿಕೊಂಡಿರುವುದರಿಂದ ಕಾಮಗಾರಿ ನಿರ್ವಹಣೆಗೆ ಅಡಚಣೆಯುಂಟಾಗಿ ಕಾಮಗಾರಿ ಸ್ಥಳದಲ್ಲಿರುವ ಮಿಷನರಿ ವಸ್ತುಗಳ ನಾಶಪಡಿಸುವ ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿಗೆ ನಷ್ಟ ಉಂಟಾಗುವ ಸಾಧ್ಯತೆಯಿರುವುದರಿಂದ ಈ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಹೇಮಾವತಿ ಲಿಂಕ್ ಕೆನಾಲ್ ಆರಂಭಕ್ಕೆ ವಿರೋಧಿಸಿರುವ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಸ್ತೆಯಲ್ಲಿಯೇ ಅಡ್ಡಲಾಗಿ ಮಲಗಿ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಹರಸಾಹಸಪಟ್ಟಿದ್ದಾರೆ. ಆದಾಗ್ಯೂ ಪ್ರತಿಭಟನೆ ಹಿಂಪಡೆಯದ ಹೋರಾಟಗಾರರು ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ.

You cannot copy content of this page

Exit mobile version