Home ರಾಜ್ಯ ಹಾಸನ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಂದ ಪ್ರತಿಭಟನೆ

ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರಿಂದ ಪ್ರತಿಭಟನೆ

ರೈತರಿಗೆ ಸ್ಪಂದಿಸುವಂತೆ ಜಿಲ್ಲಾಡಳಿತಕ್ಕೆ ಮನವಿ

ಹಾಸನ : ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ ಬೂವನಹಳ್ಳಿ ಗ್ರಾಮಸ್ಥರು ಡಿಸಿ ಕಛೇರಿ ಆವರಣದಲ್ಲಿ ವಿಮಾನ ನಿಲ್ದಾಣ ಭೂಸಂತ್ರಸ್ತರ ಹೋರಾಟ ಸಮಿತಿ” ಮತ್ತು “ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಾಸನದ ಬೂವನಹಳ್ಳಿ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಬೂವನಹಳ್ಳಿ, ಲಕ್ಷಿಸಾಗರ, ದ್ಯಾವಲಾಪುರ, ತೆಂಡಿಹಳ್ಳಿ ಮತ್ತು ಜಿ.ಮೈಲನಹಳ್ಳಿ ಸೇರಿದಂತೆ ಹಲವು ಗ್ರಾಮಗಳ ರೈತರ ನೂರಾರು ಎಕ್ಕರೆ ಕೃಷಿಯೋಗ್ಯ ಭೂಮಿಯನ್ನು ಕೆಐಡಿಬಿ ಭೂಸ್ವಾಧೀನ ಮಾಡಿಕೊಂಡು ವಿಮಾನ ನಿಲ್ದಾಣದ ಕಾರ್ಯ ನಡೆಯುತ್ತಿದೆ.

1997 ರಲ್ಲಿ ಕೆಐಡಿಬಿಯಿಂದ ಭೂಸ್ವಾಧೀನ ಪ್ರಕ್ರಿಯೆ ನಡೆದಾಗಲೇ ವಿಮಾನ ನಿಲ್ದಾಣದ ಸುತ್ತಲೂ ಬರುವ ಗ್ರಾಮಗಳಿಗೆ ಮತ್ತು ಕೃಷಿ ಭೂಮಿಗೆ ಅನುಕೂಲವಾಗುವಂತೆ ಸಂಪರ್ಕ ರಸ್ತೆಯನ್ನು ನಿರ್ಮಾಣ ಮಾಡಿಕೊಡುವುದಾಗಿ ಜಿಲ್ಲಾಡಳಿತವು ಭರವಸೆ ನೀಡಿತ್ತು. ಈ ಭರವಸೆ ಈಡೇರದಿದ್ದರೆ ಸುತ್ತಮುತ್ತಲ ಗ್ರಾಮಗಳಿಗೆ ಸಂಲರ್ಕವೇ ಕಡಿತವಾಗಿ ರೈತರು ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಇದರ ಜೊತೆಗೆ ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೂ ಒಂದೊAದು ಉದ್ಯೋಗ ನೀಡುತ್ತೇವೆಂಬ ಭರವಸೆಯನ್ನು ಜಿಲ್ಲಾಡಳಿತ ನೀಡಿತ್ತು. ಪ್ರಸ್ತುತ ಈ ಕುರಿತು ಜಿಲ್ಲಾಡಳಿತ ಅಧಿಕೃತವಾಗಿ ತೀರ್ಮಾನ ಮಾಡಬೇಕಾಗಿದೆ.


ಬೂವನಹಳ್ಳಿ, ಲಕ್ಷಿಸಾಗರ, ದ್ಯಾವಲಾಪುರ, ತೆಂಡಿಹಳ್ಳಿ, ಜಿ.ಮೈಲನಹಳ್ಳಿ, ಸಂಕೇನಹಳ್ಳಿ, ಚಿಕ್ಕಬೂವನಹಳ್ಳಿ, ಕೊಮ್ಮೇನಹಳ್ಳಿ, ಚಟ್ಟನಹಳ್ಳಿ, ಹಲಸಿನಹಳ್ಳಿ, ಗಾಡೇನಹಳ್ಳಿ, ಸಮುದ್ರವಳ್ಳಿ, ಗೇಕರವಳ್ಳಿ, ಯೋಗಿಹಳ್ಳಿ, ಹಂಡ್ರAಗಿ, ಕುಂದೂರು ಮಠ ರಸ್ತೆ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಗೆ ವಿಮಾನ ನಿಲ್ದಾಣ ಪ್ರಾರಂಭವಾದ ನಂತರ ರಸ್ತೆ ಸಂಪರ್ಕ ಇಲ್ಲದಾಗುತ್ತದೆ. ಇವರೆಲ್ಲರೂ ಹತ್ತಾರು ಕಿಲೋಮೀಟರ್‌ಗಳು ಸುತ್ತಿಬಳಸಿ ತಮ್ಮ ಕೆಲಸ ಕಾರ್ಯಗಳಿಗೆ ಹಾಸನಕ್ಕೆ ಬರಬೇಕಾಗುತ್ತದೆ.
ಒಂದೆಡೆ ಆದಾಯದ ಮೂಲವಾಗಿದ್ದ ಕೃಷಿಯೋಗ್ಯ ಭೂಮಿಯನ್ನು ಕಳೆದುಕೊಂಡು, ಪರ್ಯಾಯ ಉದ್ಯೋಗವೂ ಇಲ್ಲದೆ ರೈತರು ಅತ್ಯಂತ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.


ವಿಮಾನ ನಿಲ್ದಾಣದ ಸುತ್ತಮುತ್ತಲಿನ ಭೂಮಿಯು ಹಲವು ವರ್ಷಗಳ ಹಿಂದೆ ರೈತರಿಗೆ ಬಗರ್ ಹುಕುಂ ಸಾಗುವಳಿಯ ಆಧಾರದಲ್ಲಿ ಮಂಜೂರಾಗಿದ್ದರೂ, ರೈತರೇ ಸ್ವಾಧೀನಾನುಭವದಲ್ಲಿದ್ದರೂ, ಇದುವರೆಗೂ ಈ ಭೂಮಿಯಲ್ಲಿ ಪೂರ್ಣ ಪ್ರಮಾಣದ ದುರಸ್ತಿಕಾರ್ಯ ಕೈಗೊಂಡಿಲ್ಲದಿರುವುದರಿಂದ ಬಹುತೇಕ ರೈತರಿಗೆ ಪಟ್ಟಭದ್ರಹಿತಾಸಕ್ತಿಗಳು ದಾರಿತಪ್ಪಿಸಿ ಮೋಸ ಮಾಡುತ್ತಿದ್ದಾರೆ.


ಜೊತೆಗೆ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಳ್ಳುತ್ತಿರುವ ಲಕ್ಷಿಸ ಗ್ರಾಮದ ರೈತರ ಭೂಮಿಗೆ ಸೂಕ್ತ ಪರಿಹಾರವನ್ನು ನೀಡಿಲ್ಲ.
ಈ ಹಿನ್ನೆಲೆಯಲ್ಲಿ ಹಾಸನ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತ ರೈತರು ಈ ಕೆಳಗಿನ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ 1 ಫೆಬ್ರವರಿ 2025 ಶನಿವಾರದಂದು “ಹಾಸನ ವಿಮಾನ ನಿಲ್ದಾಣ ಭೂಸಂತ್ರಸ್ತರ ಹೋರಾಟ ಸಮಿತಿ” ಮತ್ತು “ಕರ್ನಾಟಕ ಪ್ರಾಂತ ರೈತ ಸಂಘ”ದ ನೇತೃತ್ವದಲ್ಲಿ ಹಾಸನದ ಮಾನ್ಯ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರವನ್ನು ಸಲ್ಲಿಸುತ್ತಿದ್ದೇವೆ. ಜಿಲ್ಲಾಡಳಿತ ಕೂಡಲೇ ಈ ಬೇಡಿಕೆಗಳಿಗೆ ಸ್ಪಂದಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕಾಗಿ ಮನವಿ.

You cannot copy content of this page

Exit mobile version