Monday, June 17, 2024

ಸತ್ಯ | ನ್ಯಾಯ |ಧರ್ಮ

ಮರಾಠ ಕೋಟಾ ಪ್ರತಿಭಟನೆ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ, ಸೇವೆಗಳನ್ನು ನಿಲ್ಲಿಸಿದ ರಾಜ್ಯ ಸಾರಿಗೆ

ಬೆಂಗಳೂರು: ಮಹಾರಾಷ್ಟ್ರದ ಒಸ್ಮಾನಾಬಾದ್ ಜಿಲ್ಲೆಯ ತುರೋರಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಒಸ್ಮಾನಾಬಾದ್‌ ಜಿಲ್ಲೆಯ ತುರೋರಿ ಗ್ರಾಮದಲ್ಲಿ ನಡೆದಿದೆ. ಘಟನೆಯ ಸಮಯದಲ್ಲಿ ಬಸ್ 48 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಎಲ್ಲರೂ ಸುರಕ್ಷಿತ ಎಂದು ಘೋಷಿಸಲಾಗಿದೆ.

KA 38F1201 ಸಂಖ್ಯೆಯ KSRTC ಬಸ್ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯ ಬಗ್ಗೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿದ ನಂತರ, ತುರ್ತು ಕ್ರಮಗಳನ್ನು ಘೋಷಿಸಲಾಯಿತು ಮತ್ತು ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲಾಯಿತು.

ತುರೋರಿ ಗ್ರಾಮದ ಬಳಿ ಪ್ರತಿಭಟನಾಕಾರರು ಬಸ್ಸನ್ನು ತಡೆದು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಒತ್ತಾಯಿಸಿ ನಂತರ ಬೆಂಕಿ ಹಚ್ಚಿದರು. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ.

ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ನಿಲ್ಲಿಸಿದ KKRTC

ಘಟನೆ ಬೆಳಕಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC ) ಮಹಾರಾಷ್ಟ್ರಕ್ಕೆ ಎಲ್ಲಾ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಈ ಸಂಬಂಧ ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ಆದೇಶ ಹೊರಡಿಸಿದ್ದಾರೆ. ಬಸ್ ಸಂಚಾರ ಯಾವಾಗ ಪುನರಾರಂಭವಾಗುತ್ತದೆ ಎಂಬುದು ಸ್ಪಷ್ಟವಾಗಿಲ್ಲ ಆದರೆ ನೆರೆಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಬಂದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೆಕೆಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಮುನ್ನ ಈ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಗಡಿ ವಿವಾದ ಮತ್ತು 840 ಮರಾಠಿ ಭಾಷಿಕ ಹಳ್ಳಿಗಳ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ಕಾನೂನು ಹೋರಾಟದಲ್ಲಿ ತೊಡಗಿವೆ. ‘ಕರಾಳ ದಿನ’ ಆಚರಿಸಲು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕ್ರಮವನ್ನು ಬೆಂಬಲಿಸಲು ತಮ್ಮ ಸರ್ಕಾರವು ಬೆಳಗಾವಿಗೆ ಪ್ರತಿನಿಧಿಯನ್ನು ಕಳುಹಿಸಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು