Monday, August 11, 2025

ಸತ್ಯ | ನ್ಯಾಯ |ಧರ್ಮ

ಧರ್ಮಸ್ಥಳ ದೇವಸ್ಥಾನ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಶೀಘ್ರ ಭದ್ರತೆ ಕಲ್ಪಿಸಿ : ಸರ್ಕಾರಕ್ಕೆ ಗಿರೀಶ್ ಮಟ್ಟಣ್ಣನವರ್ ಮನವಿ

ವಿಶೇಷ ಬೆಳವಣಿಗೆಯಲ್ಲಿ ಧರ್ಮಸ್ಥಳದ ಸರಣಿ ಸಾವಿನ ಪ್ರಕರಣ ಮತ್ತು ಸೌಜನ್ಯ ಸಾವಿನ ಪ್ರಕರಣದ ಪ್ರಮುಖ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ಮತ್ತು ರಾಜ್ಯಸಭೆ ಸದಸ್ಯ ವೀರೇಂದ್ರ ಹೆಗ್ಗಡೆಯವರ ಒಡೆತನದ ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಿಡಿಯೋ ಒಂದರಲ್ಲಿ ಮಾತನಾಡಿದ ಗಿರೀಶ್ ಮಟ್ಟಣ್ಣನವರ್ ಈ ರೀತಿಯಾಗಿ ವಿವರಿಸಿದ್ದಾರೆ.

ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಸಂಸತ್ತಿನ ರಾಜ್ಯಸಭೆ ಕಲಾಪದಲ್ಲಿ ಮಾತನಾಡಿದ ಒಂದು ಅಂಶ ತೀರಾ ಕುತೂಹಲದಿಂದ ಕೂಡಿದ್ದು ಈ ಬಗ್ಗೆ ಸರ್ಕಾರ ಗಂಭೀರವಾಗಿ ಆಲೋಚಿಸಬೇಕು ಎಂದಿದ್ದಾರೆ. ಡಾ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಯಲ್ಲಿ ‘ಶಾಲಾ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಬಂದರೆ ಏನು ಕ್ರಮ ಕೈಗೊಳ್ಳಬೇಕು’ ಎಂಬ ಪ್ರಶ್ನೆಯ ಹಿಂದೆ ಧರ್ಮಸ್ಥಳ ಸರಣಿ ಸಾವುಗಳ ಪ್ರಕರಣಕ್ಕೂ ನೇರ ಸಂಬಂಧವಿದೆ ಎಂದು ಗಿರೀಶ್ ಮಟ್ಟಣ್ಣನವರ್ ಆತಂಕ ವ್ಯಕ್ತಪಡಿಸಿದ್ದಾರೆ.

ಧರ್ಮಸ್ಥಳದಲ್ಲಿ ಸರಣಿಯಲ್ಲಿ ಶವ ಹೂತಿದ್ದನ್ನು ಹೇಗೆ ಮೇಲೆತ್ತಬೇಕು ಎಂದು ಇಡೀ ದೇಶ ಕುತೂಹಲದಿಂದ ಕಾಯುತ್ತಿರಬೇಕಾದರೆ, ಧರ್ಮಸ್ಥಳ ಧರ್ಮಾಧಿಕಾರಿ ರಾಜ್ಯಸಭೆಯಲ್ಲಿ ಎತ್ತಿದ ಪ್ರಶ್ನೆ ತೀವ್ರ ಕುತೂಹಲ ಮೂಡಿಸಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಡಾ.ವೀರೇಂದ್ರ ಹೆಗ್ಗಡೆಯವರ ಈ ಪ್ರಶ್ನೆಯ ಹಿಂದೆ ಏನೋ ಒಂದು ಹುನ್ನಾರ ಇದೆ, ಬಾಡಿಗೆ ಭಯೋತ್ಪಾದಕರನ್ನು ಇಟ್ಟು ಕೃತಕವಾಗಿ ಅವಘಡಗಳನ್ನು ಸೃಷ್ಟಿ ಮಾಡಬಹುದು. ಇವರದೇ ದೇವಸ್ಥಾನ ಅಥವಾ ಶಾಲಾ ಕಾಲೇಜುಗಳಲ್ಲಿ ಬಾಂಬ್ ಇಡುವ ಮೂಲಕ ಧರ್ಮಸ್ಥಳದ ಇಡೀ ಪ್ರಕರಣವನ್ನು ಬೇರೆ ಕಡೆಗೆ ಗಮನ ಸೆಳೆಯುವ ಪ್ರಯತ್ನ ನಡೆಸಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಹೀಗಾಗಿ ಮಂಜುನಾಥೇಶ್ವರ ದೇವಸ್ಥಾನ ಮತ್ತು ವೀರೇಂದ್ರ ಹೆಗ್ಗಡೆಯವರ ಶಿಕ್ಷಣ ಸಂಸ್ಥೆಗಳಿಗೆ ಭದ್ರತೆ ಕಲ್ಪಿಸಬೇಕು ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page