ಮಂಡ್ಯ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.
ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟವನ್ನು ಖಂಡಿಸಿ ಯತ್ನಾಳ್ ಅವರು ನಿನ್ನೆ ಮದ್ದೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ್ ಅವರ ದೂರಿನನ್ವಯ ಎಫ್‌ಐಆರ್ ದಾಖಲಿಸಲಾಗಿದೆ.
ಹೊಸ ಪಕ್ಷದ ಬಗ್ಗೆ ಯತ್ನಾಳ್ ಹೇಳಿಕೆ
ರಾಜ್ಯ ಬಿಜೆಪಿ ಹೊಂದಾಣಿಕೆ ರಾಜಕಾರಣವನ್ನು ಕೈಬಿಡಬೇಕು ಮತ್ತು ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಯತ್ನಾಳ್ ಆಗ್ರಹಿಸಿದ್ದಾರೆ. “ಬಿಜೆಪಿಯವರು ನನ್ನನ್ನು ಗೌರವದಿಂದ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಇಲ್ಲವಾದರೆ ನಾನೇ ಹೊಸ ಪಕ್ಷವನ್ನು ಸ್ಥಾಪಿಸುತ್ತೇನೆ” ಎಂದು ಅವರು ಹೇಳಿದ್ದಾರೆ.
“ನಾನು ಮತ್ತು ಪ್ರತಾಪ್ ಸಿಂಹ ಸೇರಿ ಹೊಸ ಹಿಂದೂ ಪಕ್ಷವನ್ನು ಕಟ್ಟುತ್ತೇವೆ. ಬಿಜೆಪಿಯವರು ನನ್ನನ್ನು ಗೌರವದಿಂದ ವಾಪಸ್ ಕರೆಸಿಕೊಳ್ಳಲಿ, ಇಲ್ಲವಾದಲ್ಲಿ ಹೊಸ ಹಿಂದೂ ಪಕ್ಷ ಕಟ್ಟುತ್ತೇವೆ” ಎಂದು ಯತ್ನಾಳ್ ಎಚ್ಚರಿಕೆ ನೀಡಿದರು.