Friday, July 25, 2025

ಸತ್ಯ | ನ್ಯಾಯ |ಧರ್ಮ

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ

ಬೆಂಗಳೂರು ಜು 19: ಚುನಾವಣೆ ಪೂರ್ವ ಕೊಟ್ಟಿದ್ದ ಮಾತಿನಂತೆ ಮೊದಲ ಅಧಿವೇಶನದಲ್ಲೇ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆಗೆ, ತಿದ್ದುಪಡಿ ಮಸೂದೆ ಮಂಡಿಸಲು ವಿಶೇಷ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಒಪ್ಪಿಗೆ ಪಡೆದಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆ ನಡೆಸುವುದಕ್ಕೆ ಎರಡು ದಿನಗಳ ಮೊದಲು ದಲಿತ ಸಮುದಾಯಗಳ ಮುಖಂಡರು, ವಕೀಲರುಗಳ ಸಭೆ ನಡೆಸಿದ್ದರು. ಈ ಸಭೆಯಲ್ಲಿ ವ್ಯಕ್ತವಾದ ಒಕ್ಕೊರಲ ತೀರ್ಮಾನದಂತೆ ದೂರು ದಾಖಲಿಸಲು ಇರುವ ಕಾಲಮಿತಿ ತೆಗೆಯಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಚಾರಿತ್ರಿಕ ಹೆಜ್ಜೆ ಇಟ್ಟಿದೆ.

ತಿದ್ದುಪಡಿಯಲ್ಲಿ ಏನಿದೆ?

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಹಂಚಿಕೆಯಾದ ಜಮೀನನ್ನು ಸರ್ಕಾರದ ಅನುಮತಿಯಿಲ್ಲದೆ ಪರಭಾರೆ ಮಾಡಿದ ಸಂದರ್ಭದಲ್ಲಿ ಜಮೀನು ಮಾಲೀಕರು ಕಾಯ್ದೆಯ ಸೆಕ್ಷನ್‌ 5(1) ರನ್ವಯ ದೂರು ದಾಖಲಿಸಲು ಕಾಲಮಿತಿ ತೆಗೆದು ಹಾಕುವ ಕುರಿತು ಕಾಯ್ದೆ ತಿದ್ದುಪಡಿ ಮಾಡಲು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

2023-24ನೇ ಆಯವ್ಯಯದಲ್ಲಿ ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಇನ್ನಷ್ಟು ಬಲಪಡಿಸುವ ಕುರಿತು ಪ್ರಸ್ತಾಪಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಸ್ತುತ ಅಧಿವೇಶನದಲ್ಲಿಯೇ ತಿದ್ದುಪಡಿ ಮಂಡಿಸುವ ಗುರಿಯೊಂದಿಗೆ ಮುಂದಡಿಯಿಟ್ಟಿದ್ದಾರೆ. ಜುಲೈ 17ರಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಅಭಿಪ್ರಾಯ ಪಡೆದಿದ್ದರು. ಇದೀಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿಗೆ ಅನುಮೋದನೆ ಪಡೆದುಕೊಂಡು ವಿಧಾನಮಂಡಲದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page