Wednesday, June 26, 2024

ಸತ್ಯ | ನ್ಯಾಯ |ಧರ್ಮ

5 & 8ನೇ ತರಗತಿ ವಿದ್ಯಾರ್ಥಿಗಳಿಗೆ ʼಪಬ್ಲಿಕ್‌ ಪರೀಕ್ಷೆʼ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ಮತ್ತು ಮೌಲ್ಯಮಾಪನ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದ ಪಠ್ಯಕ್ರಮವನ್ನು ಅನುಸರಿಸುವ ಎಲ್ಲಾ ಶಾಲೆಗಳಗೂ ಈ ಆದೇಶ ಅನುಕರಣೆಯಾಗಲಿದ್ದು, ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯಗಳ ಕೊರತೆಯನ್ನು ನಿವಾರಿಸಲು ಮತ್ತು ರಾಜ್ಯ ಪಠ್ಯಕ್ರಮವನ್ನು ಅನುಸರಿಸುವ ಎಲ್ಲಾ ಶಾಲೆಗಳ ಒಟ್ಟಾರೆ ಸಾಧನೆಯನ್ನು ತಿಳಿಯಲು ಸರ್ಕಾರ ಈ ನಿರ್ಧಾರವನ್ನು ಮಾಡಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕ ರಾಜ್ಯ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯಿಂದ ಪರೀಕ್ಷೆ ಮತ್ತು ನಿರ್ವಹಣಾ ವೆಚ್ಚಗಳನ್ನು ಭರಿಸಲು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ ನೋಡಿಕೊಳ್ಳಲು ಆದೇಶಿಸಿದೆ.

ಐದನೇ ತರಗತಿಗೆ ಒಂದು ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು, ಎಂಟನೇ ತರಗತಿಯ 50 ವಿದ್ಯಾರ್ಥಿಗಳು ಲಭ್ಯವಿರಬೇಕು. ಒಂದು ವೇಳೆ ಕೊಠಡಿಗಳ ಸಂಖ್ಯೆ ಕಡಿಮೆಯಿದ್ದರೆ, ಅಗತ್ಯ ಮೂಲ ಸೌಕರ್ಯಗಳನ್ನು ಹೊಂದಿರುವ ಎರಡು ಕಿ.ಮೀ ವ್ಯಾಪ್ತಿಯೊಳಗಿನ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಮಾಡಬೇಕು.

Related Articles

ಇತ್ತೀಚಿನ ಸುದ್ದಿಗಳು