Tuesday, July 29, 2025

ಸತ್ಯ | ನ್ಯಾಯ |ಧರ್ಮ

ವಿದ್ಯಾರ್ಥಿಗಳ ಗಮನಕ್ಕೆ : ನಾಳೆ‌ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಮಾರ್ಚ್‌ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಏಪ್ರಿಲ್‌ 21ರ ಶುಕ್ರವಾರ ಬೆಳಗ್ಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ಪರೀಕ್ಷಾ ಮಂಡಳಿಯಿಂದ ಸುದ್ದಿಗೋಷ್ಟಿ ನಡೆಸಲಾಗುತ್ತದೆ. ನಂತರ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್‌ನಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಸರ್ಕಾರದ ಅಧಿಕೃತ ವೆಬ್ ಆದ
https://karresults.nic.in/ ನಲ್ಲಿ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಮಡಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page