ಪಂಜಾಬ್‌ನ ಲುಧಿಯಾನ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆ: ಒಳಚರಂಡಿ ಸ್ವಚ್ಛಗೊಳಿಸುತ್ತಿದ್ದ ಮೂವರು ಕಾರ್ಮಿಕರು ವಿಷಾನಿಲಕ್ಕೆ ಬಲಿ

ಲುಧಿಯಾನ: ಪಂಜಾಬ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಫ್ಯಾಕ್ಟರಿಯೊಂದರಲ್ಲಿ ಗ್ಯಾಸ್ (ವಿಷಾನಿಲ) ಸೋರಿಕೆಯಾದ ಪರಿಣಾಮ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಪಂಜಾಬ್‌ನ ಅತಿ ದೊಡ್ಡ ನಗರವಾದ ಲುಧಿಯಾನದ ಚೀಮಾ ಚೌಕ್ ಸಮೀಪವಿರುವ ಇಂಡಸ್ಟ್ರಿಯಲ್ ಏರಿಯಾ-ಬಿ ಬ್ಲಾಕ್‌ನ ‘ಡೀಪ್ ಟೂಲ್ಸ್ ಫ್ಯಾಕ್ಟರಿ’ಯಲ್ಲಿ ಸೋಮವಾರ ಈ ಘಟನೆ ನಡೆದಿದೆ. ಫ್ಯಾಕ್ಟರಿಯಲ್ಲಿ ಮಲಿನ ನೀರು ಹಾಗೂ ಒಳಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ವಿಷಾನಿಲ ಸೋರಿಕೆಯಾಗಿದ್ದು, ಸ್ಥಳದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಕುರಿತು ಲುಧಿಯಾನ ಡಿಸಿಪಿ ಹರಪಾಲ್ ಸಿಂಗ್ ಮಾತನಾಡಿ, “ಈ ದುರಂತವು ಸೋಮವಾರ ಮಧ್ಯಾಹ್ನ ಸುಮಾರು 2.30ರ ವೇಳೆಗೆ ಸಂಭವಿಸಿದೆ. ಅಪಘಾತದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡಿರುವ ಇಬ್ಬರನ್ನು ತಕ್ಷಣವೇ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸಮಗ್ರ ತನಿಖೆಯನ್ನು ಆರಂಭಿಸಿದ್ದಾರೆ,” ಎಂದು ವಿವರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು