Home ದೆಹಲಿ BRICS ಶೃಂಗಸಭೆ ದೆಹಲಿಗೆ Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

BRICS ಶೃಂಗಸಭೆ ದೆಹಲಿಗೆ Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ

0

ನವದೆಹಲಿ: 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ನವದೆಹಲಿಗೆ ಆಗಮಿಸಿದ್ದಾರೆ. ಗುರುವಾರ ತಡರಾತ್ರಿ ದೆಹಲಿಯ ಪಾಲಂ ವಾಯುಪಡೆ ನಿಲ್ದಾಣಕ್ಕೆ ಬಂದಿಳಿದ ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಕೆ.ವಿ. ಸಿಂಗ್ ಅವರು ಪ್ರೀತಿಯಿಂದ ಬರಮಾಡಿಕೊಂಡರು.ಈ ಕುರಿತು ಎಸ್ಕ್ ನಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು, 18ನೇ ಬ್ರಿಕ್ಸ್ ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭಾರತಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಕೆ.ವಿ. ಸಿಂಗ್ ಅವರು ಅವರನ್ನು ಬರಮಾಡಿಕೊಂಡರು.

ಭಾರತ ಮತ್ತು ರಷ್ಯಾ ಬಹುಮುಖ ಹಾಗೂ ದೀರ್ಘಕಾಲದ ಸಂಬಂಧವನ್ನು ಹೊಂದಿದ್ದು, ಈ ಸಂಬಂಧ ವಿಶೇಷ ಮತ್ತು ವಿಶೇಷಾಧಿಕಾರ ಹೊಂದಿದ ಕಾರ್ಯತಂತ್ರದ ಪಾಲುದಾರಿಕೆಯ ಮೇಲೆ ಆಧಾರಿತವಾಗಿದೆ” ಎಂದು ಹೇಳಿದ್ದಾರೆ.ಭಾರತದ ಆತಿಥ್ಯದಲ್ಲಿ ಸೆಪ್ಟೆಂಬರ್ 12 ಮತ್ತು 13 ರಂದು ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಈ ಬಾರಿಯ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದ್ದು, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಮೂರು ದಿನಗಳ ಭಾರತದಲ್ಲಿ ತಂಗಲಿದ್ದು, ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಹಾಗೂ ಇಂಧನ ಸಹಕಾರ ವಿಸ್ತರಣೆಗೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ. ಉಕ್ರೇನ್ ಯುದ್ಧ ಆರಂಭವಾದ 2022ರ ಫೆಬ್ರವರಿ ಬಳಿಕ ರಷ್ಯಾದ ಹೊರಗೆ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪುಟಿನ್ ಅವರು ಇದೇ ಮೊದಲ ಬಾರಿಗೆ ಖುದ್ದಾಗಿ ಭಾಗವಹಿಸುತ್ತಿದ್ದಾರೆ.

You cannot copy content of this page

Exit mobile version