ಪ್ರೆಸ್ ಕ್ಲಬ್ ಎದುರು ಶಾಸಕ ಅಶೋಕ್ ರೈ ಬೆಂಬಲಿಗರಿಂದ ಪ್ರತಿಭಟನೆ: ಸ್ಥಳದಲ್ಲಿ ಬಿಗುವಿನ ವಾತಾವರಣ, ಪೊಲೀಸ್ ಭದ್ರತೆಯಲ್ಲಿ ತೆರಳಿದ ಹಕೀಮ್ ಕುರ್ನಾಡ್ಕ

ಬೆಂಗಳೂರು: ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರ ವರ್ಚಸ್ಸಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಶಾಸಕರ ಬೆಂಬಲಿಗರು ಪ್ರೆಸ್ ಕ್ಲಬ್ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ತೀವ್ರ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಕಾಂಗ್ರೆಸ್ ಪಕ್ಷದಿಂದ ಈ ಹಿಂದೆಯೇ ಉಚ್ಚಾಟಿತಗೊಂಡಿರುವ ಹಕೀಮ್ ಕುರ್ನಾಡ್ಕ ಅವರು ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಶಾಸಕರ ಬೆಂಬಲಿಗರು ಕಟ್ಟಡದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಶಾಸಕ ಅಶೋಕ್ ರೈ ಅವರೇ ಖುದ್ದು ಸ್ಥಳಕ್ಕೆ ಧಾವಿಸಿ ಕಾರ್ಯಕರ್ತರನ್ನು ಸಮಾಧಾನಪಡಿಸಿ ವಾಪಸ್ ಕಳುಹಿಸಲು ಯತ್ನಿಸಿದರು.

ಇಷ್ಟಾದರೂ ಪತ್ರಿಕಾಗೋಷ್ಠಿ ಮುಗಿಯುವ ಹೊತ್ತಿಗೆ ನೂರಾರು ಕಾರ್ಯಕರ್ತರು ಸ್ಥಳದಲ್ಲಿ ನೆರೆದಿದ್ದರಿಂದ ಆತಂಕದ ವಾತಾವರಣ ಉಂಟಾಯಿತು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಹಕೀಮ್ ಅವರನ್ನು ಬಿಗಿ ಭದ್ರತೆಯಲ್ಲಿ ಪ್ರೆಸ್ ಕ್ಲಬ್‌ನಿಂದ ಹೊರಗೆ ಕರೆತಂದು ಪೊಲೀಸ್ ಜೀಪಿನಲ್ಲಿ ಸುರಕ್ಷಿತವಾಗಿ ಸ್ಥಳದಿಂದ ಕಳುಹಿಸಿಕೊಟ್ಟರು.

Related Articles

ಇತ್ತೀಚಿನ ಸುದ್ದಿಗಳು