ರಾಹುಲ್ ಗಾಂಧಿ ಟ್ವಿಟರ್ ಪ್ರೊಪೈಲ್‌ನಲ್ಲಿ ತ್ರಿವರ್ಣ

ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯ ಅಂಗವಾಗಿ “ಹರ್ ಘರ್ ತಿರಂಗ” ಆಚರಣೆಯ ನಿಮಿತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯ ಪ್ರೊಪೈಲ್ ಪೋಟೋವನ್ನು ಬದಲಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರೊಪೈಲ್ ಚಿತ್ರ ಬದಲಿಸಿದ ಒಂದು ದಿನದ ನಂತರ ರಾಹುಲ್ ಗಾಂಧಿ ಬದಲಿಸಿದ್ದಾರೆ.

ರಾಹುಲ್ ಗಾಂಧಿ ತಮ್ಮ ಟ್ವಿಟರ್ ಖಾತೆಯಲ್ಲಿ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಅವರು ತ್ರಿವರ್ಣ ಧ್ವಜ ಹಿಡಿದಿರುವ ಚಿತ್ರವನ್ನು ಅಪ್ಲೊಡ್ ಮಾಡಿದ್ದಾರೆ.

“ತ್ರಿವರ್ಣ ಧ್ವಜವು ದೇಶದ ಹೆಮ್ಮೆ, ಅದು ಪ್ರತಿಯೊಬ್ಬ ನಾಗರಿಕನ ಹೃದಯದಲ್ಲಿದೆ” ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು