Wednesday, June 26, 2024

ಸತ್ಯ | ನ್ಯಾಯ |ಧರ್ಮ

ರಾಜ್ಯದ 19 ಜಿಲ್ಲೆಗಳಲ್ಲಿ Yellow ಅಲರ್ಟ್‌..!

ಬೆಂಗಳೂರು: ರಾಜ್ಯದಲ್ಲಿ ಇಂದು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದ್ದು 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಆಗಸ್ಟ್‌ 2ರಂದು ಯೆಲ್ಲೊ ಹಾಗೂ ನಂತರ ನಾಲ್ಕು ದಿನಗಳಲ್ಲಿಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಹಾಗಾಗಿ ಆ.2ರಿಂದ ಎರಡು ದಿನಗಳ ಕಾಲ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡದಂತೆ ಯಾತ್ರಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿ.ಮೀ.ವೇಗದಲ್ಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಹಾಗೆ ಉಳಿದ ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು