Home ದೇಶ ನೂತನ ಉಪರಾಷ್ಟ್ರಪತಿಯಾಗಿ `ಸಿ.ಪಿ.ರಾಧಾಕೃಷ್ಣನ್’ ಪ್ರಮಾಣವಚನ ಸ್ವೀಕಾರ

ನೂತನ ಉಪರಾಷ್ಟ್ರಪತಿಯಾಗಿ `ಸಿ.ಪಿ.ರಾಧಾಕೃಷ್ಣನ್’ ಪ್ರಮಾಣವಚನ ಸ್ವೀಕಾರ

0

ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಆ ಮೂಲಕ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ರಾಧಾಕೃಷ್ಣನ್ ತಮ್ಮ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯ ನಂತರ ಈ ಚುನಾವಣೆ ನಡೆದಿದೆ. ಎನ್‌ಡಿಎ ಬೆಂಬಲಿತ ಅಭ್ಯರ್ಥಿ ರಾಧಾಕೃಷ್ಣನ್ ಅವರು INDIA ಮೈತ್ರಿಕೂಟದ ಅಭ್ಯರ್ಥಿ ಬಿ.ಸುದರ್ಶನ್ ಅವರನ್ನು ಮಣಿಸುವ ಮೂಲಕ ಹೊಸ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಅಭ್ಯರ್ಥಿ 452 ಮತಗಳನ್ನು ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. ಫಲಿತಾಂಶ ಘೋಷಣೆಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸಿಪಿ ರಾಧಾಕೃಷ್ಣನ್ ಅವರನ್ನು ಅಭಿನಂದಿಸಿದರು ಮತ್ತು ಹೊಸದಾಗಿ ಆಯ್ಕೆಯಾದ ಉಪರಾಷ್ಟ್ರಪತಿಗಳು ಭಾರತದ ಸಾಂವಿಧಾನಿಕ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತಾರೆ ಮತ್ತು ಸಂಸದೀಯ ಸಂವಾದಕ್ಕೆ ಸಕಾರಾತ್ಮಕ ಕೊಡುಗೆ ನೀಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

You cannot copy content of this page

Exit mobile version