ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಪೋಷಕರನ್ನು ಕಳೆದುಕೊಂಡ ಸುಮಾರು 20 ಕ್ಕೂ ಹೆಚ್ಚು ಮಕ್ಕಳನ್ನು “ದತ್ತು” ಪಡೆಯಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಅವರ ಪ್ರಕಾರ , ಪಾಕಿಸ್ತಾನದ ಶೆಲ್ ದಾಳಿಯಲ್ಲಿ ತಮ್ಮ ಹೆತ್ತವರನ್ನು ಅಥವಾ ಕುಟುಂಬದ ಏಕೈಕ ಜೀವನಾಧಾರವನ್ನು ಕಳೆದುಕೊಂಡ ಪೂಂಚ್‌ನ 22 ಮಕ್ಕಳ ಸಂಪೂರ್ಣ ಶೈಕ್ಷಣಿಕ ವೆಚ್ಚವನ್ನು ರಾಹುಲ್ ಗಾಂಧಿಯವರು ಭರಿಸಲಿದ್ದಾರೆ.
ಮಕ್ಕಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅನುವು ಮಾಡಿಕೊಡಲು ಸಹಾಯಧನದ ಮೊದಲ ಕಂತನ್ನು ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಕರ್ರಾ ಹೇಳಿದರು. “ಈ ಮಕ್ಕಳು ಪದವಿ ಪಡೆಯುವವರೆಗೆ ಸಹಾಯಧನ ಮುಂದುವರಿಯುತ್ತದೆ” ಎಂದು ಅವರು ಹೇಳಿದರು.
ಮೇ ತಿಂಗಳಲ್ಲಿ ಪೂಂಚ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಸ್ಥಳೀಯ ಪಕ್ಷದ ನಾಯಕರನ್ನು ಸಂತ್ರಸ್ತ ಮಕ್ಕಳ ಪಟ್ಟಿಯನ್ನು ಸಂಗ್ರಹಿಸಲು ಕೇಳಿಕೊಂಡರು. ನಂತರ, ಒಂದು ಸಮೀಕ್ಷೆಯನ್ನು ನಡೆಸಿ ಸರ್ಕಾರಿ ದಾಖಲೆಗಳನ್ನು ಪರಿಶೀಲಿಸಿದ ನಂತರ ಮಕ್ಕಳ ಹೆಸರುಗಳನ್ನು ಅಂತಿಮಗೊಳಿಸಲಾಯಿತು.