ಲೋಕಸಭೆ ವಿರೋಧ ಪಕ್ಷದ ನಾಯಕರನ್ನಾಗಿ ಇಂದು ಎಐಸಿಸಿಯ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿರುವುದಾಗಿ ತಿಳಿದು ಬಂದಿದೆ.
ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮಾಹಿತಿ ನೀಡಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಎಲ್ಒಪಿಯಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಸಂಸತ್ತಿನಲ್ಲಿ “ಸಂವಿಧಾನ” ಹಿಡಿದು ಪ್ರಮಾಣವಚನ ಸ್ವೀಕರಿಸಿದ ನಂತರ ಕಾಂಗ್ರೆಸ್ ಸಂಸದೀಯ ಮಂಡಳಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.