ಮೈಸೂರು : ಮೈಸೂರಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅಧಿಕೃತ ಚಾಲನೆ ನೀಡಿದ್ದಾರೆ. ಅದರಂತೆ ಇಂದಿನಿಂದಲೇ ಮನೆ ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಆಗಲಿದೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಮೂಲಕ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದಲೇ ಪ್ರತಿ ತಿಂಗಳು2000 ಹಣ ಮನೆ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಲಿದೆ.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಈ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತಾ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.