Monday, July 28, 2025

ಸತ್ಯ | ನ್ಯಾಯ |ಧರ್ಮ

ವಯನಾಡ್‌ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ

ಹೊಸದೆಹಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರು ಉತ್ತರ ಪ್ರದೇಶದ ರಾಯ್ ಬರೇಲಿ ಸಂಸದರಾಗಿ ಮುಂದುವರಿಯಲಿದ್ದಾರೆ.

ಈ ವಿಷಯವನ್ನು ಲೋಕಸಭೆ ಸ್ಪೀಕರ್ ಕಚೇರಿಗೆ ಅಧಿಕೃತವಾಗಿ ತಿಳಿಸಲಾಗಿದೆ. ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ವಯನಾಡ್ ಸಂಸದ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ ಬರೇಲಿಯಿಂದ ಸ್ಪರ್ಧಿಸಿ ಬಹುಮತದೊಂದಿಗೆ ಗೆದ್ದಿದ್ದರು.

ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ರಾಹುಲ್ ಎರಡು ಸ್ಥಾನಗಳಲ್ಲಿ ಒಂದನ್ನು ಬಿಟ್ಟುಕೊಡಬೇಕು. ರಾಹುಲ್ ರಾಯ್ ಬರೇಲಿ ಸಂಸದರಾಗಿ ಮುಂದುವರಿಯಲಿದ್ದಾರೆ ಮತ್ತು ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page