ಕಾಂಗ್ರೆಸ್‌ ಇರುವ ಒಬ್ಬ ಒಬಿಸಿ ಮುಖ್ಯಮಂತ್ರಿಯನ್ನೂ ಕೆಳಗಿಳಿಸುವ ಮೂಲಕ ತನ್ನ ಬಣ್ಣ ಬಯಲುಮಾಡಿದೆ: ಪ್ರಲ್ಹಾದ ಜೋಶಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ನಡೆಸಿಕೊಂಡ ರೀತಿ ಸರಿಯಲ್ಲ. ಹಿಂದೆ ವೀರೇಂದ್ರ ಪಾಟೀಲ್ ಅವರನ್ನು ರಾಜೀವ್ ಗಾಂಧಿ ಅವಮಾನಿಸಿದ್ದರು, ಈಗ ಅದೇ ರೀತಿ ಸಿದ್ದರಾಮಯ್ಯ ಅವರನ್ನು ರಾಹುಲ್ ಗಾಂಧಿ ಅತ್ಯಂತ ಕೀಳಾಗಿ ನಡೆಸಿಕೊಂಡಿದ್ದಾರೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಗುರುವಾರ ಟೀಕಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಜೋಶಿ, “ಕಾಂಗ್ರೆಸ್ ಅಧಿಕಾರದಲ್ಲಿರುವ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಮೇಲ್ಜಾತಿಯ ಮುಖ್ಯಮಂತ್ರಿಗಳಿದ್ದಾರೆ. ಕಾಂಗ್ರೆಸ್ ನಾಯಕರು ಸದಾ ‘ಒಬಿಸಿ ಮಂತ್ರ’ ಜಪಿಸುತ್ತಾರೆ, ಆದರೆ ಈಗ ಅಧಿಕಾರದಲ್ಲಿದ್ದ ಏಕೈಕ ಒಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೇಗೆ ನಡೆಸಿಕೊಳ್ಳಲಾಗುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ,” ಎಂದರು.

“ಕಳೆದ ಮೂರು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ನಾವು ಅಸ್ಥಿರತೆ, ಸಂಪೂರ್ಣ ಕಾನೂನುಬಾಹಿರತೆ ಮತ್ತು ಗೊಂದಲದ ಗೂಡಾಗಿರುವ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಏನಾಗಲಿದೆ ಎಂದು ನಾನು ಈಗಲೇ ಊಹಿಸಲು ಸಾಧ್ಯವಿಲ್ಲ,” ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು