ಬಳ್ಳಾರಿ: ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯ ಹೋಮ್ ಟೈಲರಿಂಗ್ ಘಟಕಕ್ಕೆ ಭೇಟಿ ನೀಡಿ, ತಯಾರಕರು, ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು.
ಬಳ್ಳಾರಿಯಲ್ಲಿ ಭಾರತ ಐಕ್ಯತಾ ಯಾತ್ರೆ ಸಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಹೋಮ್ ಟೈಲರಿಂಗ್ ಘಟಕಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು, ಸ್ಥಳೀಯ ತಯಾರಕರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾಹಿತಿ ಪಡೆದರು.
ಟೈಲರಿಂಗ್ ಘಟಕಗಳ ಕಾರ್ಮಿಕರು ಸರ್ಕಾರದ ಯಾವುದೇ ಸಹಾಯವಿಲ್ಲದೆ ಯಂತ್ರಗಳನ್ನು ಬಾಡಿಗೆಗೆ ಪಡೆಯುವುದರಿಂದ ಹೆಚ್ಚುವರಿ ಹೊರೆ ಅನುಭವಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು. ಜಿಎಸ್ ಟಿ ಯಿಂದಾಗಿ ಹಲವಾರು ಘಟಕಗಳನ್ನು ಮುಚ್ಚಲಾಗಿದೆ ಎಂದು ಅವರು ಮಾಹಿತಿ ನೀಡಿದರು.