Home ದೇಶ ವಿದ್ಯಾರ್ಥಿವೇತನ ವಿಳಂಬದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌ ಗಾಂಧಿ

ವಿದ್ಯಾರ್ಥಿವೇತನ ವಿಳಂಬದ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌ ಗಾಂಧಿ

0

ದೆಹಲಿ: ಹಿಂದುಳಿದ ವರ್ಗಗಳಿಗೆ ನೀಡಬೇಕಾದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ವಿಳಂಬದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಲಿತ, ಎಸ್‌ಟಿ, ಇಬಿಸಿ, ಒಬಿಸಿ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ನಿಲಯಗಳಲ್ಲಿನ ಶೋಚನೀಯ ಪರಿಸ್ಥಿತಿಗಳನ್ನು ವಿವರಿಸಿ ಅವರು ಬುಧವಾರ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಈ ಎರಡು ಪ್ರಮುಖ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಅವರು ಒತ್ತಾಯಿಸಿದ್ದಾರೆ. ಇವು ಹಿಂದುಳಿದ ವರ್ಗಗಳಿಗೆ ಸೇರಿದ ಶೇ. 90ರಷ್ಟು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ದಲಿತ, ಎಸ್‌ಟಿ, ಒಬಿಸಿ, ಇಬಿಸಿ ಮತ್ತು ಇತರ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್‌ಗಳಲ್ಲಿನ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಬಿಹಾರಕ್ಕೆ ಭೇಟಿ ನೀಡಿದ್ದಾಗ, ದರ್ಭಂಗಾ ಜಿಲ್ಲೆಯ ಅಂಬೇಡ್ಕರ್ ಹಾಸ್ಟೆಲ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ವಿದ್ಯಾರ್ಥಿಗಳು ಆರರಿಂದ ಏಳು ವಿದ್ಯಾರ್ಥಿಗಳನ್ನು ಒಂದೇ ಕೋಣೆಯಲ್ಲಿ ಬಲವಂತವಾಗಿ ಇರಿಲಾಗುತ್ತಿದೆ ಎಂದು ದೂರಿದ್ದಾರೆ. ಸರಿಯಾದ ಕುಡಿಯುವ ನೀರು, ಮೆಸ್ ಸೌಲಭ್ಯವಿಲ್ಲ, ಗ್ರಂಥಾಲಯವಿಲ್ಲ ಮತ್ತು ಇಂಟರ್ನೆಟ್ ಪ್ರವೇಶವಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ.

ಎರಡನೆಯದಾಗಿ, ಹಿಂದುಳಿದ ಗುಂಪುಗಳ ವಿದ್ಯಾರ್ಥಿಗಳಿಗೆ ನೀಡಲಾಗುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಸಿಗುತ್ತಿಲ್ಲ. ಬಿಹಾರದಲ್ಲಿ ಸ್ಕಾಲರ್‌ಷಿಪ್ ಪೋರ್ಟಲ್ ಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿಲ್ಲ. 2021-22 ರಲ್ಲಿ ಯಾವುದೇ ವಿದ್ಯಾರ್ಥಿಗೆ ವಿದ್ಯಾರ್ಥಿವೇತನ ಸಿಕ್ಕಿಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಅದರ ನಂತರ, ವಿದ್ಯಾರ್ಥಿವೇತನ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿದೆ, 2023ರ ಆರ್ಥಿಕ ವರ್ಷದಲ್ಲಿ 1.36 ಲಕ್ಷದಿಂದ 2024 ರಲ್ಲಿ 0.69 ಲಕ್ಷಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿವೇತನದ ಮೊತ್ತವೂ ತುಂಬಾ ಕಡಿಮೆಯಾಗಿದೆ, ಇದು ನಾಚಿಕೆಗೇಡಿನ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

You cannot copy content of this page

Exit mobile version