Monday, July 8, 2024

ಸತ್ಯ | ನ್ಯಾಯ |ಧರ್ಮ

ರಾಹುಲ್‌ ಗಾಂಧಿಯವರ ಭಾಷಣ ಹಿಂದೂ ಧರ್ಮವನ್ನು ವಿರೋಧಿಸಲ್ಲ: ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ

ನವದೇಹಲಿ: ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಮಾಡಿದ ಮೊದಲ ಭಾಷಣವನ್ನು ಕೆಲವು ಬಿಜೆಪಿ ನಾಯಕರು ಹಿಂದೂ ವಿರೋಧಿ ಎಂದು ಬಿಂಬಿಸಲು ಪ್ರಯತ್ನಿಸಿದರು. ಆದರೆ, ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಭಾನುವಾರ ರಾಹುಲ್‌ ಗಾಂಧಿಯವರು ಭಾಷಣದಲ್ಲಿ ಹಿಂದೂ ಧರ್ಮಕ್ಕೆ ವಿರುದ್ಧವಾದುದು ಯಾವುದು ಇಲ್ಲ ಎಂದಿದ್ದಾರೆ.

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ರಾಹುಲ್ ಗಾಂಧಿ, ಬಿಜೆಪಿ ನಾಯಕರು ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, “ರಾಹುಲ್ ಗಾಂಧಿಯವರು ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ” ಎಂದು ಕರೆದಿದ್ದಾರೆ ಎಂದು ಹೇಳಿಕೆಯವನ್ನು ತಿರುಚುವ ಪ್ರಯತ್ನ ಮಾಡಿದ್ದರು.

ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸ್ವಾಮಿ ಅವಿಮುಕ್ತೇಶ್ವರಾನಂದ, “ರಾಹುಲ್ ಗಾಂಧಿಯವರ ಭಾಷಣವು ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ; ಅವರ ಸಂಪೂರ್ಣ ಭಾಷಣವನ್ನು ನಾವು ಕೇಳಿದ್ದೇವೆ. ಅವರು ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ಅವರು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂದಿದ್ದಾರೆ.

ರಾಹುಲ್‌ ಅವರ ಭಾಷಣದ ಒಂದು ಚಿಕ್ಕ ತುಣುಕನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಅದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದು ಮಠಾಧೀಶರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ರಾಹುಲ್ ಗಾಂಧಿಯವರ ಸಂಸತ್ತಿನ ಮೊದಲ ಭಾಷಣ ದೊಡ್ಡ ಚರ್ಚೆಯನ್ನೆ ಹುಟ್ಟು ಹಾಕಿತ್ತು. ಸ್ಪೀಕರ್ ಹಲವಾರು ಹೇಳಿಕೆಗಳನ್ನು ದಾಖಲೆಯಿಂದ ಹೊರಹಾಕಲು ಸಲಹೆ ನೀಡಿದ್ದು ಆಯಿತು. ಹಿಂದೂ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು.

ಈ ಕುರಿತು ಹೇಳೀದ ಪ್ರಿಯಾಂಕಾ ಗಾಂಧಿ, “ನನ್ನ ಸಹೋದರ ರಾಹುಲ್ ಎಂದಿಗೂ ಹಿಂದೂಗಳ ವಿರುದ್ಧ ಮಾತನಾಡಲು ಸಾಧ್ಯವಿಲ್ಲ, ಅವರು ಬಿಜೆಪಿ ಮತ್ತು ಬಿಜೆಪಿ ನಾಯಕರ ಬಗ್ಗೆ ಮಾತ್ರ ಮಾತನಾಡುತ್ತಾರೆ” ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು