30ರಿಂದ ರಾಹುಲ್ ಹರಿಯಾಣ ಪ್ರವಾಸ

ಚಂಡೀಗಢ: ಮುಂದಿನ ತಿಂಗಳು 5ರಂದು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇದೇ ತಿಂಗಳ 30ರಿಂದ ರಾಜ್ಯದಲ್ಲಿ ಯಾತ್ರೆ ಕೈಗೊಳ್ಳಲಿದ್ದಾರೆ.

ಈ ಪ್ರವಾಸದಲ್ಲಿ ಪ್ರಿಯಾಂಕಾ ಗಾಂಧಿ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಮೂಲಗಳು ನೀಡಿರುವ ಮಾಹಿತಿ ಪ್ರಕಾರ ಇದೇ 30ರಂದು ಬೆಳಗ್ಗೆ 11 ಗಂಟೆಗೆ ನಾರಾಯಣನಗರ ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ಆರಂಭವಾಗಿ ಸಂಜೆ 5 ಗಂಟೆಗೆ ಕುರುಕ್ಷೇತ್ರದಲ್ಲಿ ಮುಕ್ತಾಯಗೊಳ್ಳಲಿದೆ.

ಏಳು ಕ್ಷೇತ್ರಗಳಲ್ಲಿ ಯಾತ್ರೆ ಮುಂದುವರಿಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಕ್ಟೋಬರ್ 3ಕ್ಕೆ ಪ್ರಚಾರ ಮುಗಿಯುವ ಮುನ್ನ ರಾಹುಲ್ ಯಾತ್ರೆ ಇನ್ನು ಕೆಲವು ಕ್ಷೇತ್ರಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೆ. ಇದು ಪಾದಯಾತ್ರೆಯಲ್ಲ ರೋಡ್ ಶೋ ಇದ್ದಂತೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು