ಹಾಸನ : ರೈಲ್ವೆ ಇಲಾಖೆಯಿಂದ ರಾಜಘಟ್ಟ ಬಳಿ ನಿರ್ಮಾಣ ಮಾಡುತ್ತಿರುವ ಲೋಡಿಂಗ್ ಲಾರಿಗಳಿಗೆ ಶೀಟ್ ಅಳವಡಿಕೆ ಕಾಮಗಾರಿಯಿಂದ ಸ್ಥಳೀಯರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಮನವಿ ನಡೆಸಿದ ಬೆನ್ನಲ್ಲೇ ಸ್ಥಳಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈಲ್ವೆ ಇಲಾಖೆಯ ರೈಲ್ವೆ ಕಾಮಗಾರಿಯಿಂದ ಸುತ್ತಮುತ್ತಲ 8 ಹಳ್ಳಿಗಳಿಗೆ ತೊಂದರೆ ಆಗುತ್ತಿದ್ದು ಕೈಗಾರಿಕಾ ಪ್ರದೇಶಕ್ಕೆ ತೆರಳುವ ಕಾರ್ಮಿಕರು, ಹಾಗೂ ನಗರ ಪ್ರದೇಶ ಹಾಗೂ ಬೈ ಪಾಸ್ ರಸ್ತೆಗೆ ದಿನನಿತ್ಯ ಓಡಾಡುವ ವಾಹನಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ,ಸಾರ್ವಜನಿಕರಿಗೆ ಇದರಿಂದ ತೊಂದರೆ ಆಗುತ್ತದೆ ಎಂಬುದು ಸ್ಥಳೀಯರ ಆರೋಪ.
ಸ್ಥಳ ಪರಿಶೀಲನೆ ನಡೆಸಿದ ಶಾಸಕ ಸ್ವರೂಪ್ ಪ್ರಕಾಶ್, ಜನರ ಅಹವಾಲುಗಳನ್ನು ಸ್ವೀಕರಿಸಿ ಬಳಿಕ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ತಕ್ಷಣ ಕಾಮಗಾರಿ ನಿಲ್ಲಿಸಿ ಸ್ಥಳೀಯರಿಗೆ ನೆರವಾಗಬೇಕು ಎಂದು ಸೂಚನೆ ನೀಡಿ, ಈ ಬಗ್ಗೆ ಕೇಂದ್ರ ರೈಲ್ವೆ ಸಚಿವರಾದಂತಹ ಶ್ರೀ ವಿ.ಸೋಮಣ್ಣ ಅವರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಅಲ್ಲಿಯ ವರೆಗೆ ಯಾವುದೇ ಕಾಮಗಾರಿ ಮಾಡಕೂಡದು ಎಂದು ಸೂಚಿಸಿದರು.