ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಚೆನ್ನೈಯಲ್ಲಿ ತೀವ್ರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಗುರುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಶುಕ್ರವಾರ ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಡಿಸೆಂಬರ್ 16ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ತೀವ್ರತೆ ಹೆಚ್ಚಿದಲ್ಲಿ ಡಿಸೆಂಬರ್ 17, 18 ರಂದು ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಂಭವವಿದೆ.