ಮುಂದಿನ ಒಂದು ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ – ಐಎಂಡಿ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ (Karnataka )ಪ್ರಸ್ತುತ ಮುಂಗಾರು ಮಳೆಯ (Rain)ಅಬ್ಬರ ಕೊಂಚ ತಗ್ಗಿದ್ದರೂ, ಉತ್ತರ ಮತ್ತು ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರ ವರೆಗೆ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಿಸಿಲು ಮತ್ತು ಮೋಡ ಕವಿದ ವಾತಾವರಣ ಇರಲಿದೆ. ಘಟ್ಟ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ ತಕ್ಷಣಕ್ಕೆ ಭಾರೀ ಮಳೆಯ ಮುನ್ಸೂಚನೆಯಿಲ್ಲ.ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿ ತುಂತುರು ಹಾಗೂ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲೂ ಮಳೆಯ ನಿರೀಕ್ಷೆಯಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಹಲವೆಡೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ತಂಪಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

Related Articles

ಇತ್ತೀಚಿನ ಸುದ್ದಿಗಳು