ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಬಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ವಿಶೇಷವಾಗಿ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದಿನಿಂದ ಮೂರು ದಿನ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಸಂಜೆ ಸಣ್ಣ ಪ್ರಮಾಣದ ಮಳೆಯಾಗಲಿದ್ದು, ಇಂದಿನಿಂದ ಹೆಚ್ಚಾಗುವ ಸಾಧ್ಯತೆ ಇದೆ.ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಕಲಘಟಗಿ, ಬೆಳಗಾವಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯುಂಟಾಗುತ್ತಿದ್ದು, ಇದರ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನ ಮೇಲಾಗಲಿದೆ. ಇಂದು ಧಾರವಾಡ, ಕಲಬುರಗಿ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.