ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಾಮರಾಜನಗರದಲ್ಲಿ ಮಳೆಯಾಗಲಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ಮಳೆ ಇರಲಿದ್ದು, ಉತ್ತರ ಒಳನಾಡು ಜಿಲ್ಲೆಗಳ ಕೆಲ ಕಡೆ ಮೋಡ ಕವಿದ ವಾತಾವರಣ ಹಾಗೂ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ