Wednesday, October 15, 2025

ಸತ್ಯ | ನ್ಯಾಯ |ಧರ್ಮ

RAIN UPDATES : ನಾಲ್ಕು ದಿನ ಮಳೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ಕರ್ನಾಟಕ (Karnataka) ಸೇರಿದಂತೆ ದಕ್ಷಿಣ ಭಾರತದಲ್ಲಿ (South India) ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Weather forecast) ಮಾಹಿತಿ ನೀಡಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೂ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಉಪಮಹಾಸಾಗರದಲ್ಲಿ ಮಳೆ ಚುರುಕಾಗಿರೋ ಪರಿಣಾಮ ಅಕ್ಟೋಬರ್ 18ರವರೆಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಎಲ್ಲೆಲ್ಲಿ ಹೆಚ್ಚು ಮಳೆ..?

ಉತ್ತರ ಒಳನಾಡಿನ ಬೀದರ್‌, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ, ಗುಡುಗು ಸಹಿತ ಮಳೆ ಆಗಲಿದೆ. ಇನ್ನು ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಹಾಗೆಯೇ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

ಬೆಂಗಳೂರಲ್ಲೂ ಭಾರಿ ಮಳೆ..?

ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಗಳೂ ಇವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಇನ್ನು, ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಕೆಲ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಡೀ ವಾರ ಮಳೆ ಕಾಟ ನೀಡಲಿದ್ದು, ದೀಪಾವಳಿ ಹಬ್ಬಕ್ಕೆ ವರುಣ ಬ್ರೇಕ್ ಕೊಡ್ತಾನಾ ಇಲ್ಲಾ ಕಾಟ ಮುಂದುವರಿಸಲಿದ್ದಾನಾ ಎಂಬ ಕೌತುಕ ಮನೆಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page