ಹೊಸದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಸ್ವಸ್ಥರಾಗಿದ್ದಾರೆ. ಗುರುವಾರ ಬೆಳಗ್ಗೆ ಅವರ ಆರೋಗ್ಯ ಹಠಾತ್ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್‌ನ ನರಶಸ್ತ್ರಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು.
ಏಮ್ಸ್ ಮೀಡಿಯಾ ಸೆಲ್ ಉಸ್ತುವಾರಿ ಡಾ ರೀಮಾ ದಾದಾ ಪ್ರಕಾರ, ರಾಜನಾಥ್ ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಅವರ ಮೇಲೆ ನಿಗಾ ಇಡುತ್ತಿದ್ದಾರೆ. ಬೆನ್ನು ನೋವಿನ ಕಾರಣ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದೆ.
ಕೇಜ್ರಿವಾಲ್ ಅರ್ಜಿ: ಇಂದು ಸುಪ್ರೀಂ ತೀರ್ಪು
ಹೊಸದೆಹಲಿ: ದೆಹಲಿ ಸಿಎಂ ಮತ್ತು ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಲಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧನದ ವಿರುದ್ಧ ಅವರು ಸುಪ್ರೀಂ ಮೆಟ್ಟಿಲು ಹತ್ತಿದ್ದರು. ಇಡಿ ಅಕ್ರಮ ಹಣ ವರ್ಗಾವಣೆ ಆರೋಪ ಮಾಡಿದೆ. ಮೇ 17ರಂದು ವಾದಗಳನ್ನು ಮುಕ್ತಾಯಗೊಳಿಸಿದ ನಂತರ ಸುಪ್ರೀಂ ಕೋರ್ಟ್ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು.