Saturday, April 19, 2025

ಸತ್ಯ | ನ್ಯಾಯ |ಧರ್ಮ

ರಾಜಸ್ಥಾನ: ಸಂಪುಟ ಸಚಿವ ಕಿರೋರಿ ಲಾಲ್ ಮೀನಾ ರಾಜೀನಾಮೆ

ರಾಜಸ್ಥಾನದ ಕ್ಯಾಬಿನೆಟ್ ಸಚಿವ ಕಿರೋರಿ ಲಾಲ್ ಮೀನಾ ಅವರು ತಮ್ಮ ರಾಜೀನಾಮೆಯನ್ನು ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರಿಗೆ ಕಳುಹಿಸಿದ್ದಾರೆ. ಆದರೆ, ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ದೌಸಾ ಕ್ಷೇತ್ರದಲ್ಲಿ ಬಿಜೆಪಿ ಸೋತರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಕಿರೋರಿ ಲಾಲ್ ಮೀನಾ ಲೋಕಸಭೆ ಚುನಾವಣೆ ವೇಳೆ ಹೇಳಿದ್ದರು.

2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುವ ಮೊದಲು, ಕಿರೋರಿ ಲಾಲ್ ಮೀನಾ ಅವರು ತಮ್ಮ ಪ್ರಭಾವದ ಪ್ರದೇಶದಲ್ಲಿ ಒಂದು ಸ್ಥಾನವನ್ನು ಕಳೆದುಕೊಂಡರೂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.

ಇದಾದ ಬಳಿಕ ಚುನಾವಣಾ ಫಲಿತಾಂಶ ಹೊರಬಿದ್ದಾಗಲೇ ಅವರು ದೌಸಾ ಸ್ಥಾನ ಕಳೆದುಕೊಂಡಿರುವುದು ಸ್ಪಷ್ಟವಾಯಿತು. ಅಂದಿನಿಂದ ಅವರು ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬ ಊಹಾಪೋಹ ಶುರುವಾಗಿತ್ತು.

ಇದೀಗ ಕಿರೋರಿ ಲಾಲ್ ಮೀನಾ ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದು, ಇನ್ನೂ ಅಂಗೀಕಾರವಾಗಿಲ್ಲ ಎಂಬ ಸುದ್ದಿ ಹೊರಬಿದ್ದಿದೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಿರೋರಿ ಲಾಲ್ ಮೀನಾ ಹೇಳಿದ್ದಾರೆ.

ರಾಜಸ್ಥಾನದ ಕೃಷಿ ಸಚಿವ ಮೀನಾ ಎರಡು ದಿನಗಳ ಹಿಂದೆ ದೆಹಲಿಗೂ ಹೋಗಿದ್ದರು. ಹೀಗಾಗಿ ಅವರು ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನಕ್ಕೆ ಹಾಜರಾಗಲಿಲ್ಲ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page