ಬೆಂಗಳೂರು: ಕರ್ನಾಟಕ ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಯ ಮೇಲೆ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.