ನವದೆಹಲಿ : ರಾಜ್ಯಸಭೆಯ ದ್ವೈವಾರ್ಷಿಕ ಹಾಗೂ ಉಪಚುನಾವಣೆಗಳಿಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಏಳು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವುದಾಗಿ ಎಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕದಿಂದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಅವರನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸಲಾಗಿದೆ.
ಇದೇ ವೇಳೆ ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ದಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ ಹಾಗೂ ಜಾರ್ಖಂಡ್‌ನಿಂದ ಪ್ರಣವ್ ಝಾ ಅವರಿಗೆ ಪಕ್ಷ ಟಿಕೆಟ್ ನೀಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಗುರುವಾರ ಪ್ರಕಟಣೆ ಹೊರಡಿಸಿದ್ದು, ರಾಜ್ಯಸಭೆಯಲ್ಲಿ ಪಕ್ಷದ ಬಲವರ್ಧನೆ ಮತ್ತು ವಿವಿಧ ರಾಜ್ಯಗಳ ಪ್ರತಿನಿಧಿತ್ವವನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಪ್ರಾತಿನಿದ್ಯದ ಜೊತೆಗೆ ಉಳಿದ ರಾಜ್ಯಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪ್ರಕಟಿಸಿದೆ. ಅದರಂತೆ ಮಧ್ಯಪ್ರದೇಶದಿಂದ ಮೀನಾಕ್ಷಿ ನಟರಾಜನ್, ರಾಜಸ್ಥಾನದಿಂದ ನೀರಜ್ ದಾಂಗಿ, ತಮಿಳುನಾಡಿನಿಂದ ಪ್ರವೀಣ್ ಚಕ್ರವರ್ತಿ, ಜಾರ್ಖಂಡ್‌ನಿಂದ ಪ್ರಣವ್ ಝಾ ಹೆಸರುಗಳನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಪ್ರಕಟಿಸಿದೆ.
ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಕಟಿಸಿರುವ ಈ ಅಭ್ಯರ್ಥಿಗಳ ಪಟ್ಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದ್ದು, ವಿವಿಧ ರಾಜ್ಯಗಳಲ್ಲಿ ಪಕ್ಷದ ಸಂಘಟನೆ ಮತ್ತು ಸಂಸದೀಯ ಬಲವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ.
