Sunday, July 27, 2025

ಸತ್ಯ | ನ್ಯಾಯ |ಧರ್ಮ

ಖಾಸಗಿ ಕಂಪನಿಗಳಲ್ಲಿ ಸ್ಥಳೀಯ ಮೀಸಲಾತಿ: ಕರ್ನಾಟಕಕ್ಕೆ ಕೇಂದ್ರ ಸಚಿವ ರಾಮದಾಸ್ ಅಠವಳೆ ಬೆಂಬಲ

ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡುವ ಕರ್ನಾಟಕ ನಿರ್ಧಾರದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರು ಖಾಸಗಿ ಕೋಟಾ ಕುರಿತು ಹೇಳಿಕೆ ನೀಡಿದ್ದಾರೆ.

ಒಬಿಸಿ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಖಾಸಗಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವಂತೆ ತಮ್ಮ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಳೆ) ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸುತ್ತಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಎಸ್‌ಸಿ, ಎಸ್‌ಟಿಗೆ ಸೇರಿದ ಅನೇಕ ಯುವಕರು ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಅರಸಿ ಬರುತ್ತಿದ್ದಾರೆ, ಆದರೆ ಖಾಸಗಿ ಉದ್ಯೋಗದಲ್ಲಿ ಮೀಸಲಾತಿ ಇಲ್ಲ ಎಂದರು. ಶೀಘ್ರದಲ್ಲೇ ಸಾರ್ವಜನಿಕ ವಲಯದ ಕಂಪನಿಗಳು ಖಾಸಗಿ ವಲಯಕ್ಕೆ ಬದಲಾಗುವ ಸಾಧ್ಯತೆ ಇದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಖಾಸಗಿ ವಲಯದಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡುವಂತೆ ತಮ್ಮ ಪಕ್ಷವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕೇಳುತ್ತಿದೆ ಎಂದು ಅವರು ಹೇಳಿದರು. ಆದರೆ ತಾವು ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ವಿರೋಧಿಸುತ್ತಿಲ್ಲ ಎಂದರು.

ಏತನ್ಮಧ್ಯೆ, ಖಾಸಗಿ ಕಂಪನಿಗಳು ಮತ್ತು ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಶೇ 50ರಷ್ಟು ಆಡಳಿತಾತ್ಮಕ ಹುದ್ದೆಗಳು ಮತ್ತು ಶೇ 75 ರಷ್ಟು ಆಡಳಿತೇತರ ಹುದ್ದೆಗಳನ್ನು ಒದಗಿಸುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿತ್ತು. ಮತ್ತೊಂದೆಡೆ, ರಾಜ್ಯ ಸರ್ಕಾರದ ನಿರ್ಧಾರದಿಂದ ಕಂಪನಿಗಳು ರಾಜ್ಯವನ್ನು ತೊರೆಯಬಹುದು ಎಂದು ಕೈಗಾರಿಕಾ ಸಂಸ್ಥೆ ನಾಸ್ಕಾಮ್ ಆತಂಕ ವ್ಯಕ್ತಪಡಿಸಿದ್ದವು. ನಿನ್ನೆ ಸಂಜೆಯ ನಂತರ ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page