ರಾಮನಗರ : ರಾಮನಗರ ಜಲ್ಲೆಯಲ್ಲಿ ಕಳೆದ ವಾರದಿಂದಲು ಮಳೆ ಸುರಿಯುತ್ತಿದ್ದು, ಜನರ ಜೀವನ ಅಸ್ತವ್ಯಸ್ಥಗೊಂಡಿರುವ ಪರಿಣಾಮ ಶಿಕ್ಷಣ ಸಚಿವ ಆಶ್ವತ್ ನಾರಯಣ್ ಜಿಲ್ಲೆಗೆ ಭೇಟಿ ನೀಡಿದ್ದು ಪರಿಸ್ಥಿತಿ ಪರಿಶೀಲಿಸಿದ್ದಾರೆ.
ರಾಮನಗರ ಜಿಲ್ಲೆಯಲ್ಲಿ ಸುರಿದ ವಿಪರೀತ ಮಳೆಯಿಂದಾಗಿ ಮನೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಕುರಿತು ಮಾಹಿತಿ ನೀಡಿ ಅಶ್ವತ್ ನಾರಯಣ್ ಮಕ್ಕಳನ್ನು ಕಳೆದುಕೊಂಡಿರುವ ಸೋಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ನೇಪಾಳ ಮೂಲದ ಕುಟುಂಬಕ್ಕೆ ಸಾಂತ್ವನ ಹೇಳಿ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಜಿಲ್ಲೆಯ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಿಗೂ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.