ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ರೇಣುಕಾಸ್ವಾಮಿ ಪ್ರಕರಣದಲ್ಲಿ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ರಮ್ಯಾ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಮತ್ತು ಉಳಿದವರಿಗಾಗಿ ಬಲೆ ಬೀಸಿದ್ದಾರೆ.
ಸುಪ್ರೀಂ ಕೋರ್ಟಿನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದ್ದಾಗ, ರಮ್ಯಾ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ’ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯು ದರ್ಶನ್ ಅಭಿಮಾನಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕೊತ್ತು. ಪರಿಣಾಮವಾಗಿ, ರಮ್ಯಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಕೆಳಗೆ ಅಶ್ಲೀಲ ಮತ್ತು ಕೆಟ್ಟ ಕಮೆಂಟುಗಳನ್ನು ಬರೆದು ಕಿರುಕುಳ ನೀಡಲಾಗಿತ್ತು. ಜೊತೆಗೆ ಅಶ್ಲೀಲ ಸಂದೇಶಗಳನ್ನು ಸಹ ಕಳುಹಿಸಲಾಗಿತ್ತು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಮ್ಯಾ, ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಾದ ನಂತರ, ಸಿಸಿಬಿ ಸೈಬರ್ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಮತ್ತು ಚಿತ್ರದುರ್ಗ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಇಲ್ಲಿಗೆ ನಿಲ್ಲುವುದಿಲ್ಲ ಎಂದು ಪೊಲೀಸರು ತಿಳಿಸಿದ್ದು, ದೂರಿನಲ್ಲಿ ದಾಖಲಾಗಿರುವ ಇತರ ವ್ಯಕ್ತಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಈ ಪ್ರಕರಣದ ಮೂಲಕವಾದರೂ ಸಾಮಾಜಿಕ ಜಾಲತಾಣಗಳಲ್ಲಿ ಬೇಜವಬ್ದಾರಿಯಿಂದ ಕಮೆಂಟು ಮಾಡುವ ಪ್ರವೃತ್ತಿಗೆ ಕಡಿವಾಣ ಬೀಳಲಿದೆಯೇ ನೋಡಬೇಕಿದೆ.