ಜೈಲಿನಿಂದ ಅತ್ಯಾಚಾರ ಆರೋಪಿ ಮುನಿರತ್ನ ಬಿಡುಗಡೆ; ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.

ಜೈಲಿನಿಂದ ಶಾಸಕರ ಬಿಡುಗಡೆ ಹಿನ್ನೆಲೆ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ನ್ಯಾಯಾಲಯವು ಮುನಿರತ್ನ ಅವರಿಗೆ ಮಂಗಳವಾರ ಶರತ್ತುಬದ್ಧ ಜಾಮೀನು ನೀಡಿ, 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿತ್ತು. 

ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು. ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಮಂಜೂರಾಗಿದೆ.

Related Articles

ಇತ್ತೀಚಿನ ಸುದ್ದಿಗಳು