BREAKING NEWS : ಮತ್ತೆ 4 ದಿನ ಎಸ್‌ಐಟಿ ಕಸ್ಟಡಿಗೆ ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ

ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು ಮತ್ತೆ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 10 ರವರೆಗೆ ಕಸ್ಟಡಿಗೆ ನೀಡಿದೆ.

ಈವರೆಗೆ ಪೊಲೀಸರ ಯಾವುದೇ ತನಿಖೆಗೂ ಸೂಕ್ತ ರೀತಿಯಲ್ಲಿ ಸ್ಪಂದಿಸದ ಹಿನ್ನೆಲೆಯಲ್ಲಿ ತನಿಖೆ ಮುಗಿಯುವ ವರೆಗೂ ಆರೋಪಿಯನ್ನು ನಮ್ಮ ಕಸ್ಟಡಿಯಲ್ಲೇ ಇರಿಸಬೇಕು ಎಂದು ಎಸ್‌ಐಟಿ ಮನವಿ ಮಾಡಿಕೊಂಡಿತ್ತು.

ಸಧ್ಯ ಈ ಮನವಿ ಹಿನ್ನೆಲೆಯಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಇನ್ನೂ ಎಸ್ಐಟಿ ತನಿಖೆ ಎದುರಿಸಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು