Home ಬೆಂಗಳೂರು ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲೆ ಅತ್ಯಾಚಾರ: ಶಾಸಕ ಮುನಿರತ್ನ ಸೇರಿದಂತೆ 7ಜನರ ವಿರುದ್ಧ ಪ್ರಕರಣ ದಾಖಲು

ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲೆ ಅತ್ಯಾಚಾರ: ಶಾಸಕ ಮುನಿರತ್ನ ಸೇರಿದಂತೆ 7ಜನರ ವಿರುದ್ಧ ಪ್ರಕರಣ ದಾಖಲು

0

ಬೆಂಗಳೂರು: ಈಗಾಗಲೇ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪದಡಿ ನ್ಯಾಯಾಲಯದ ವಶದಲ್ಲಿರುವ ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ನಾಯಕ ಮುನಿರತ್ನ ಹಾಗೂ ಅವರ ಸಹಚರರ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿರುವುದಾಗಿ ವರದಿಯಾಗಿದೆ.

ಮುನಿರತ್ನ, ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ದೂರು ಸಲ್ಲಿಸಿದ್ದಾರೆ. ಖಾಸಗಿ ರೆಸಾರ್ಟ್‌ ಒಂದರಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿತ್ತು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಡಿವೈಎಸ್ ಪಿ ದಿನಕರ ಶೆಟ್ಟಿ ಎದುರು ಸಂತ್ರಸ್ತೆ ತನ್ನ ದೂರನ್ನು ದಾಖಲಿಸಿದ್ದಾರೆ.

ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಂತ್ರಸ್ತೆ ಬಿಜೆಪಿ ಪಕ್ಷದಲ್ಲಿಯೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾಗಿ ಹೇಳಿಕೊಂಡಿದ್ದಾರೆ. 2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ ಹನಿಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾರೆ ಎಂದು ದೂರಿದ್ದಾರೆ. ದೂರನ್ನು ಪರಿಶೀಲಿಸಿದ ನಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇಂದು ಸ್ಥಳ ಮಹಜರು ನಡೆಸಲಿದ್ದಾರೆ.

“ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸಿದ್ದೆ. ಒಮ್ಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು.ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿದ್ದರು. ಬಳಿಕ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದರು. ವಿಡಿಯೋ ಇಟ್ಟುಕೊಂಡು ಹಲವು ಬಾರಿ ಮುನಿರತ್ನ ಅತ್ಯಾಚಾರವೆಸಗಿದ್ದಾರೆ” ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಮುನಿರತ್ನ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದರು ಜಾಮೀನು ಅರ್ಜಿ ಕುರಿತಂತೆ ನ್ಯಾಯಾಧೀಶರು ಇಂದು ತೀರ್ಪು ತಿಳಿಸಲಿದ್ದಾರೆ.

You cannot copy content of this page

Exit mobile version