ಪ್ರಜ್ವಲ್ ರೇವಣ್ಣನ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ನಂತರ ರಾಜ್ಯಾದ್ಯಂತ ದೊಡ್ಡ ಸುದ್ದಿ ಮಾಡಿರುವ ದೇವರಾಜೇ ಗೌಡನಿಗೆ ಈಗ ಈ ಪ್ರಕರಣವೇ ತಿರುಗು ಬಾಣವಾಗಿ ಪರಿಣಮಿಸಿದೆ. ಪ್ರಜ್ವಲ್ ರೇವಣ್ಣನ ಪ್ರಕರಣದಲ್ಲಿ ಸಂತ್ರಸ್ತೆ ಎನ್ನಿಸಿಕೊಂಡ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ದೇವರಾಜೇ ಗೌಡನ ವಿರುದ್ಧ ಈಗ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿದ್ದು, ಐಪಿಸಿ ಸೆಕ್ಷನ್ 376 ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು, ದೇವರಾಜೇಗೌಡನನ್ನು ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ರಾತ್ರಿ ಚಿತ್ರದುರ್ಗದ ಹಿರಿಯೂರು ಬಳಿ ತಪ್ಪಿಸಿಕೊಂಡು ಹೊರಟಿದ್ದ ದೇವರಾಜೇ ಗೌಡನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಆ ನಂತರ ಇಂದು ಹಾಸನ ಪೊಲೀಸರು ಆತನನ್ನು ವಶಕ್ಕೆ ಪಡೆದು ಅತ್ಯಾಚಾರ ಪ್ರಕರಣ ಐಪಿಸಿ ಸೆಕ್ಷನ್ 376 ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.