ಲೈಂಗಿಕ ಕಿರುಕುಳ ಮತ್ತು ಹನಿಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಮುನಿರತ್ನ ಹೊರತುಪಡಿಸಿ ಉಳಿದವರ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಇತರೆ ಆರೋಪಿಗಳಾದ ಲೋಹಿತ್, ಕಿರಣ್, ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನ್ಯಾ. ಸಂತೋಷ್ ಗಜಾನನ ಭಟ್ ಅವರು ಮೂವರು ಆರೋಪಿಗಳಿಗೆ ಜಾಮೀನು ನೀಡಿದ್ದಾರೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿ ಪಕ್ಷದ ಕಾರ್ಯಕರ್ತೆಯೂ ಆಗಿ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಆಕೆಯನ್ನು ಬ್ಲಾಕ್ಮೇಲ್ ಮಾಡುವ ಮೂಲಕ ಸಮಾಜದ ಹಲವು ಗಣ್ಯರು, ಪೊಲೀಸರು, ರಾಜಕಾರಣಿಗಳ ಮೇಲೆ ಹನಿಟ್ರಾಪ್ ಮಾಡಿಸಲಾಗಿತ್ತು ಎಂಬ ಆರೋಪ ಶಾಸಕ ಮುನಿರತ್ನ ಮೇಲೆ ಇತ್ತು. ಸಧ್ಯ ಜಾಮೀನು ಅರ್ಜಿ ವಿಚಾರಣೆ ನಡೆಸದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮುನಿರತ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.