Tuesday, February 17, 2026

ಸತ್ಯ | ನ್ಯಾಯ |ಧರ್ಮ

ತಿಂಗಳುಗಟ್ಡಲೆ ಬಾಲಕಿಯ ಮೇಲೆ ಅತ್ಯಾಚಾರ: ಚೀನಿ ಪ್ರಜೆ ಬಂಧನ

ಇಸ್ಲಾಮಾಬಾದ್: ಕೆಲವು ತಿಂಗಳುಗಳಿಂದ ಹದಿಹರೆಯದ ಬಾಲಕಿ ಮೇಲೆ ಲೈಂಗಿಕ ಕಿರುಕಳ ನೀಡುತ್ತಿದ್ದ ಆರೋಪದಡಿ ಚೀನಿ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಇಸ್ಲಾಮಾಬಾದ್‌ ಪೊಲೀಸರು ತಿಳಿಸಿದ್ದಾರೆ.

ಚೀನಾದ ಪ್ರಜೆಯೊಂದಿಗೆ ಭಾಷಾಂತರಕಾರರಾಗಿ ಕೆಲಸ ಮಾಡುತ್ತಿದ್ದ 16 ವರ್ಷದ ಬಾಲಕಿ ನೀಡಿದ ದೂರಿನ ಮೇಲೆ ಶಂಕಿತನ ವಿರುದ್ಧ ಪ್ರಕರಣ ದಾಖಲಾಗಿಸಲಾಗಿದೆ ಎಂದು ಡಾನ್‌ (DAWN) ಪತ್ರಿಕೆ ಇಂದು(ಶುಕ್ರವಾರ) ವರದಿ ಮಾಡಿದೆ.

ಮಾಹಿತಿ ಪ್ರಕಾರ, ಬಾಲಕಿಯು ಕೆಲಸ ಆರಂಭಿಸದ ಕೂಡಲೇ ಶಂಕಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆಕೆಯ ಮೇಲೆ ಜನವರಿ ತಿಂಗಳುಗಳಿಂದ ಲೈಂಗಿಕ ದೌರ್ಜನ್ಯ ನಡೆಯುತ್ತಿದ್ದು, ಕಿರುಕುಳ ನೀಡುತ್ತಿರುವುದರ ಬಗ್ಗೆ ಯಾರಿಗಾದರು ಮಾಹಿತಿ ನೀಡಿದ್ದಲ್ಲಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಲೈಂಗಿಕ ಕಿರುಕುಳವನ್ನು ಮುಂದುವರೆಸುತ್ತಾ ಬಂದಿದ್ದಾನೆ ಎಂದು ವರದಿ ತಿಳಿಸಿದೆ.

ಈ ಹಿನ್ನಲೆ ಆಕೆಯು ಗರ್ಭಿಣಿಯಾಗಿದ್ದರೂ ಮನೆಯವರಿಗೆ ವಿಷಯ ತಿಳಿಸಿಲ್ಲ. ಆದರೆ ಆಕೆಯ ಅಕ್ಕ ಬಾಲಕಿಯ ಸ್ಥಿತಿಯನ್ನು ಗಮನಿಸಿದ್ದು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಗ ವೈದ್ಯರು ಹೇಳಿದ ಮಾಹಿತಿ ಪ್ರಕಾರ ಅವಳು 31 ವಾರಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ನಂತರ ಈ ಕುರಿತು ಬಾಲಕಿಯನ್ನು ಪ್ರಶ್ನಿಸಿದಾಗ ತನ್ನ ಮೇಲೆ ನಡೆಯುತ್ತಿದ್ದ ಲೈಂಗಿಕ ಕಿರುಕುಳದ ಬಗ್ಗೆ ವಿಷಯ ಬಿಚ್ಚಿಟ್ಟಿದ್ದಾಳೆ. ವಿಷಯ ತಿಳಿದ ಕೂಡಲೆ ಪೊಲೀಸರಿಗೆ ಘಟನೆ ಬಗ್ಗೆ ತಿಳಿಸಿದ್ದು ಎಫ್‌ಐಆರ್ ದಾಖಲು ಮಾಡಿದ್ದಾರೆ.

ದೂರಿನ ಮೇಲೆ ಆರೋಪಿಯನ್ನು ಬಂಧಿಸಿದ್ದು, ಆತನ ಪಾಸ್‌ಪೊರ್ಟ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page