ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಇಂದು ಮಧ್ಯಾಹ್ನದ ವೇಳೆಗೆ ಭಾರತದ ಹೆಸರಾಂತ ಉದ್ಯಮಿ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಧಿಕ ರಕ್ತದೊತ್ತಡದ ಪರಿಣಾಮ ಆರೋಗ್ಯ ಸ್ಥಿರತೆ ಕಳೆದುಕೊಂಡಿದೆ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.

ರಕ್ತದೊತ್ತಡದಲ್ಲಿ ತೀವ್ರ ಏರುಪೇರಿನ ಕಾರಣಕ್ಕೆ ರತನ್ ಟಾಟಾ ಕುಸಿದಿದ್ದಾರೆ. ನಂತರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ ದಾಖಲಾದ ನಂತರ ಅವರ ಸ್ಥಿತಿಯ ಬಗ್ಗೆ ಸಧ್ಯಕ್ಕೆ ಭಯ ಬೇಡ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ. ಸಧ್ಯ ರತನ್ ಟಾಟಾ ಅವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಮುಂದುವರೆಯುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು