Wednesday, October 9, 2024

ಸತ್ಯ | ನ್ಯಾಯ |ಧರ್ಮ

ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ

ಟಾಟಾ ಸಮೂಹ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡ ಹಿನ್ನೆಲೆಯಲ್ಲಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸೋಮವಾರ ರತನ್ ಟಾಟಾ ಅವರು ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟಾಟಾ ಸಮೂಹ ಸಂಸ್ಥೆಯ ಮೂಲಗಳು ತಿಳಿಸಿದ್ದವು.

ಅವರು ಸೋಮವಾರ ಆಸ್ಪತ್ರೆಗೆ ದಾಖಲಿದ ಕೆಲವು ಗಂಟೆಗಳ ನಂತರ, ವಯೋ ಸಂಬಂಧಿತ ಅನಾರೋಗ್ಯ ಬಾಧಿಸಿದೆ. ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. “ನನ್ನ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ನಾನು ಪ್ರಸ್ತುತ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದೇನೆ” ಎಂದು ರತನ್ ಟಾಟಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಹೇಳಿಕೆ ನೀಡಿದ್ದರು.

ಸಧ್ಯ ಆಸ್ಪತ್ರೆ ಮೂಲಗಳು ತಿಳಿಸಿದಂತೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page