Saturday, July 20, 2024

ಸತ್ಯ | ನ್ಯಾಯ |ಧರ್ಮ

ಮೀಸಲಾತಿ ವಿರೋಧಿ ಹೋರಾಟ: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾದೇಶ

ಬಾಂಗ್ಲಾದೇಶ ಹಿಂಸಾಚಾರದ ಬೆಂಕಿಯಲ್ಲಿ ಬೇಯುತ್ತಿದೆ. ಮೀಸಲಾತಿ ವಿರೋಧಿಸಿ ಪ್ರತಿಭಟನಾಕಾರರು ಆಕ್ರೋಶಗೊಂಡು ಬೆಂಕಿ ಹಚ್ಚಲು ಆರಂಭಿಸಿದ್ದಾರೆ. ಹಿಂಸಾತ್ಮಕ ಘರ್ಷಣೆಯಲ್ಲಿ ಇದುವರೆಗೆ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 2500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇದರಿಂದಾಗಿ ಶೇಖ್ ಹಸೀನಾ ಅವರ ಸರ್ಕಾರ ತಡರಾತ್ರಿ ಇಡೀ ದೇಶದಲ್ಲಿ ಕರ್ಫ್ಯೂ ವಿಧಿಸಿ ಗುಂಪನ್ನು ನಿಯಂತ್ರಿಸಲು ಸೈನ್ಯವನ್ನು ಬೀದಿಗಿಳಿದೆ. ಜತೆಗೆ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನೂ ಸ್ಥಗಿತಗೊಳಿಸಲಾಗಿದೆ.

ಈ ಹಿಂಸಾಚಾರಕ್ಕೆ ಕಾರಣವಾಗಿರುವುದು ಮೀಸಲಾತಿ. ಈ ಹಿಂದೆ ಪಾಕಿಸ್ತಾನದಿಂದ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಯೋಧರ ಮಕ್ಕಳು ಮತ್ತು ಸಂಬಂಧಿಕರಿಗೆ ಉದ್ಯೋಗಗಳಲ್ಲಿ 30 ಪ್ರತಿಶತ ಮೀಸಲಾತಿಯನ್ನು ಒದಗಿಸಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ ಶೇಖ್ ಹಸೀನಾ ಸರ್ಕಾರವು 2018ರಲ್ಲಿ ಈ ಮೀಸಲಾತಿಯನ್ನು ರದ್ದುಗೊಳಿಸಿತ್ತು.

2021ರಲ್ಲಿ, ಮೀಸಲಾತಿಯನ್ನು ಮರಳಿ ಪಡೆಯಲು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಸುಮಾರು ಮೂರು ವರ್ಷಗಳ ಕಾಲ ನಡೆದ ವಿಚಾರಣೆಯ ನಂತರ, ಹೈಕೋರ್ಟ್ ಮೀಸಲಾತಿ ಕೋಟಾವನ್ನು ಮರುಸ್ಥಾಪಿಸಿತು. ನ್ಯಾಯಾಲಯದ ಈ ಆದೇಶದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದರು.

ಈ ನಡುವೆ, ವಿದ್ಯಾರ್ಥಿಗಳ ಹೆಚ್ಚುತ್ತಿರುವ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಅಟಾರ್ನಿ ಜನರಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಆದೇಶವನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್, 4 ವಾರಗಳಲ್ಲಿ ಮೀಸಲಾತಿ ಕುರಿತು ತೀರ್ಮಾನ ನೀಡುವುದಾಗಿ ಹೇಳಿದೆ.

ಆದರೆ ಮೀಸಲಾತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಆಂದೋಲನ ಮುಂದುವರೆದಿದೆ, ಇದರಿಂದಾಗಿ ಬಾಂಗ್ಲಾದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಬಸ್ ಮತ್ತು ರೈಲು ಸೇವೆಗಳು ಸ್ಥಗಿತಗೊಂಡಿವೆ ಮತ್ತು ಶಾಲೆಗಳು ಮತ್ತು ವಿಶ್ವವಿದ್ಯಾಲಯಗಳನ್ನು ಸಹ ಮುಚ್ಚಲಾಗಿದೆ. ಪ್ರತಿಭಟನಾಕಾರರು ಬಸ್‌ಗಳು ಮತ್ತು ಸರ್ಕಾರಿ ಕಟ್ಟಡಗಳಿಗೆ ಬೆಂಕಿ ಹಚ್ಚಿದರು.

ಇತ್ತ ಸರ್ಕಾರ ಇಡೀ ದೇಶದಲ್ಲಿ ಕರ್ಫ್ಯೂ ಹೇರಿದೆ. ಪೊಲೀಸರು ಮತ್ತು ಸೇನೆ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿ ಅಶ್ರುವಾಯು ಪ್ರಯೋಗಿಸುತ್ತಿದ್ದಾರೆ. ಇದಾದ ನಂತರವೂ ವಿದ್ಯಾರ್ಥಿಗಳು ಹಿಂದೆ ಸರಿಯಲು ಸಿದ್ಧರಿಲ್ಲ. ಮೂರನೇ ತಲೆಮಾರಿನ ಸ್ವಾತಂತ್ರ್ಯ ಹೋರಾಟಗಾರರಿಗೂ ಏಕೆ ಮೀಸಲಾತಿ ನೀಡಲಾಗುತ್ತಿದೆ ಎನ್ನುವುದು ವಿದ್ಯಾರ್ಥಿಗಳ ಈಗ ವಿದ್ಯಾರ್ಥಿಗಳ ಪ್ರಶ್ನೆ.

Related Articles

ಇತ್ತೀಚಿನ ಸುದ್ದಿಗಳು