Home ಬೆಂಗಳೂರು ಬೆಂಗಳೂರಿನಲ್ಲಿ ದಾಖಲೆ ಚಳಿ ಮುಂದುವರೆದ ಶುಷ್ಕ ಹವೆ – ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ ದಾಖಲೆ ಚಳಿ ಮುಂದುವರೆದ ಶುಷ್ಕ ಹವೆ – ಹವಾಮಾನ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ (Karnataka) ಚಳಿಗಾಲ (Winter ) ಕೊನೆ ಹಂತದಲ್ಲಿದ್ದು,ಚಳಿ ಜತೆ ಒಣಹವೆ ಕೂಡ ಮುಂದುವರಿದಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ.

ಇನ್ನು,ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚಳಿ ಜತೆ ಒಣ ಹವೆಯ ವಾತಾವರಣ ಇರಲಿದೆ.

ಪ್ರಮುಖವಾಗಿ ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ಹಾಗೂ ವೃದ್ಧರು, ಮಕ್ಕಳು ಹಾಗೂ ಬಾಣಂತಿಯರು ಎಚ್ಚರಿಕೆಯಿಂದ ಇರುವಂತೆ ತಜ್ಞರು ಸೂಚಿಸಿದ್ದಾರೆ.ಬೆಂಗಳೂರಿನ ತಾಪಮಾನ ಕನಿಷ್ಠ 14°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

You cannot copy content of this page

Exit mobile version